ಮೇ 3 ರಂದು 2025ನೇ ಸಾಲಿನ ಪ್ರತಿಷ್ಠಿತಪಾರ್ತಿಸುಬ್ಬ ಪ್ರಶಸ್ತಿ ಗೌರವ ಪ್ರಶಸ್ತಿ ಪ್ರಶಸ್ತಿ ಪ್ರದಾನ ಸಮಾರಂಭ
ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪ್ರತಿಷ್ಠಿಕ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದೀಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಇವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2024ನೇ ಸಾಲಿನ ಮಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ: 03.05.2026ರಂದು ಮಧ್ಯಾಹ್ನ 01.00 ಗಂಟೆಗೆ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ, ಅಂಬಲಪಾಡಿ, ಉಡುಪಿ ಜಿಲ್ಲೆ ಇಲ್ಲಿ ಹಮ್ಮಿಕೊಂಡಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯು.ಟಿ ಖಾದರ್ ಫರೀದ್, ಸನ್ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನ ಸಭೆ ಇವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಘನ ಉಪಸ್ಥಿತರಿರುವರು. ಶ್ರೀಮತಿ ಲಕ್ಷ್ಮೀ ಆರ್.ಹೆಬ್ಬಾಳ್ಳರ್, ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಶ್ರೀ ಶಿವರಾಜ ಎಸ್.ತಂಗಡಗಿ, ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಇವರು ಪ್ರಶಸ್ತಿ ಪ್ರದಾನ ಹಾಗೂ ಕಿರು ಪರಿಚಯ ಮಸ್ತಕ ಬಿಡುಗಡೆ ಮಾಡುವರು. ಶ್ರೀ ಯಶ್ಪಾಲ್ ಎ.ಸುವರ್ಣ, ಮಾನ್ಯ ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಡಾ.ತಲ್ಲೂರು ಶಿವರಾಮ ಶೆಟ್ಟಿ, ಮಾನ್ಯ ಅಧ್ಯಕ್ಷರು, ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇವರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಯನ್ನು ಹೇಳುವರು. ಬಲ್ಲಾಳ್, ಧರ್ಮದರ್ಶಿಗಳು, ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ, ಉಡುಪಿ ಇವರು ಮಾಡುವರು. ಡಾ. ಹೆಚ್.ಎಸ್. ಬಲ್ಲಾಳ್, ಮಾನ್ಯ ಸಹಕುಲಾಧಿಪತಿಗಳು, ಮಾಹೆ, ಅಕಾಡೆಮಿಯಿಂದ ಪ್ರಕಟಿಸಲಾದ ಪುಸ್ತಕಗಳ ಬಿಡುಗಡೆ ಮಾಡುವರು. ಡಾ. ನಿ.ಬೀ ವಿಜಯ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ.
ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರು- ಡಾ. ಕೆ. ಎಂ. ರಾಘವ ನಂಬಿಯಾರ್, 5 ಜನ ಗೌರವ ಪ್ರಶಸ್ತಿ ಪುರಸ್ಕೃತರಾದ- ಶ್ರೀ ರೆಂಜಾಳ ರಾಮಕೃಷ್ಣರಾವ್, ಶ್ರೀ ವಿಷ್ಣು ಮಂಜಪ್ಪ ಆಚಾರಿ ಬಳ್ಳೂರು, ಶ್ರೀ ಡಿ. ಮನೋಹರ್ ಕುಮಾರ್, ಶ್ರೀ ಮುರಲಿ ಕಡೆಕಾರ್, ಶ್ರೀ ರಮೇಶ್, 10 ಜನ ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಾದ- ಶ್ರೀ ಸಣ್ಣಮಲ್ಲಯ್ಯ, ಶ್ರೀ ಲಕ್ಷ್ಮಣ ಗೌಡ ಬೆಳಾಲ್, ಶ್ರೀ ದಾಸಪ್ಪ ಗೌಡ ಗೇರುಕಟ್ಟೆ, ಎ.ಜಿ. ನಾಗರಾಜು, ದಾಸನಡ್ಕ ರಾಮ ಕುಲಾಲ್, ಶ್ರೀ ರಾಜೀವ್ ಶೆಟ್ಟಿ ಹೊಸಂಗಡಿ, ಶ್ರೀ ಕೇಶವ ಶಕ್ತಿನಗರ, ಶ್ರೀ ಸದಾಶಿವ ಕುಲಾಲ್, ಶ್ರೀ ಬೆಳ್ಳಾರೆ ಮಂಜುನಾಥ ಭಟ್, ಶ್ರೀ ಜಿ.ಕೆ. ಶ್ರೀನಿವಾಸ ಸಾಲಿಯಾನ್, ಹಾಗೂ ದಿ| ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಇವರ ಹೆಸರಿನಲ್ಲಿ ನೀಡುತ್ತಿರುವ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ದೇವದಾಸ ರಾವ್ ಕೊಡ್ಲಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪುರಸ್ಕೃತರಾದ ಶ್ರೀ ಅಶೋಕ ಹಾಸ್ಯಗಾರ, ಶ್ರೀ ಕೆರೆಮನೆ ಶಿವಾನಂದ ಹೆಗಡೆ, ಮಣಿಪಾಲ್ ಯುನಿವರ್ಸಲ್ ಪ್ರೆಸ್, ಇವರುಗಳು ಪ್ರಶಸ್ತಿ ಸ್ವೀಕರಿಸಲಿರುವರು.
ಮಧ್ಯಾಹ್ನ:1.00 ರಿಂದ 3.00ರವರೆಗೆ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿ ಇವರಿಂದ ಬಬ್ರುವಾಹನ ಕಾಳಗ’ ಬಡಗುತಿಟ್ಟು ಯಕ್ಷಗಾನ ಪ್ರಸಂಗದ ಪ್ರದರ್ಶನವನ್ನು ಏರ್ಪಡಿಸಿದೆ.













