ಕಳ್ಳತನ ಪ್ರಕರಣ: ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Spread the love

ಕಳ್ಳತನ ಪ್ರಕರಣ: ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರಂ ನಿವಾಸಿ ರಂಶೀದ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ. ಸುಮಾರು ಒಂದೂವರೆ ವರ್ಷದಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಜಯರಾಮ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಶಿವಾನಂದ (ಸಿಪಿಸಿ 2462) ಅವರು ಅಕ್ಟೋಬರ್ 13ರಂದು ಕೇರಳದ ನೀಲಂಬೂರು ವಂಡೂರು ಪ್ರದೇಶದಿಂದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Subscribe
Notify of

0 Comments