Home Mangalorean News Kannada News ರೈಲಿನಲ್ಲಿ ಪ್ರಯಾಣಿಕರ ಮೊಬೈಲ್ ಕಳವು, ಯುಪಿಐ ಮೂಲಕ ಹಣ ವರ್ಗಾವಣೆ: ಆರೋಪಿ ಬಂಧನ

ರೈಲಿನಲ್ಲಿ ಪ್ರಯಾಣಿಕರ ಮೊಬೈಲ್ ಕಳವು, ಯುಪಿಐ ಮೂಲಕ ಹಣ ವರ್ಗಾವಣೆ: ಆರೋಪಿ ಬಂಧನ

Spread the love

ರೈಲಿನಲ್ಲಿ ಪ್ರಯಾಣಿಕರ ಮೊಬೈಲ್ ಕಳವು, ಯುಪಿಐ ಮೂಲಕ ಹಣ ವರ್ಗಾವಣೆ: ಆರೋಪಿ ಬಂಧನ

ಬೈಂದೂರು: ಮಂಗಳೂರಿನಿಂದ ಮಡಗಾಂವ್ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಕಳವು ಮಾಡಿ, ಅದರ ಮೂಲಕ ಯುಪಿಐ (UPI) ಪಾವತಿ ವ್ಯವಸ್ಥೆ ಬಳಸಿ ₹19,847 ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಉಡುಪಿ ತಾಲೂಕಿನ ಸಾಸ್ತಾನದ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಶೀನ ಪೂಜಾರಿ ಅವರ ಪುತ್ರ ಪ್ರಹ್ಲಾದ್ (32) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

2026ರ ಆಗಸ್ಟ್ 2ರಂದು ದೂರುದಾರ ರುಬೆನ್ ಫೆರ್ನಾಂಡಿಸ್ ಅವರು ಮಂಗಳೂರಿನಿಂದ ಮಡಗಾಂವ್ ರೈಲು ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು. ಅಂದು ಬೆಳಗಿನ ಜಾವ ಸುಮಾರು 2 ಗಂಟೆಗೆ ಬೈಂದೂರು ರೈಲು ನಿಲ್ದಾಣದ ಸಮೀಪ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಬಳಿ ಇದ್ದ ಸುಮಾರು ₹17,000 ಮೌಲ್ಯದ Motorola G54 5G ಮೊಬೈಲ್ ಫೋನ್ನ್ನು ಅಪರಿಚಿತ ವ್ಯಕ್ತಿಯೊಬ್ಬ ಕಳವು ಮಾಡಿದ್ದನು. ಬಳಿಕ ಕಳವು ಮಾಡಿದ ಮೊಬೈಲ್ ಮೂಲಕ ಯುಪಿಐ ಮುಖಾಂತರ ₹19,847 ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು.

ಈ ಬಗ್ಗೆ ರುಬೆನ್ ಫೆರ್ನಾಂಡಿಸ್ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಅವರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ರೈಲಿನಲ್ಲಿ ಪ್ರಯಾಣಿಕರ ಮೊಬೈಲ್ ಕಳವು ಮಾಡಿರುವ ಇತರ ಪ್ರಕರಣಗಳ ಬಗ್ಗೆಯೂ ಮಾಹಿತಿ ಬಹಿರಂಗವಾಗಿದೆ.

ಆರೋಪಿಯು 2026ರ ಆಗಸ್ಟ್ 2ರಂದು ಜೋಶಿ ನಾರಾಯಣ ನಾಯಕ್ ಎಂಬಾತನೊಂದಿಗೆ ಸೇರಿಕೊಂಡು ಬೈಂದೂರು ಸಮೀಪದ ರೈಲ್ವೆ ಬೋಗಿಯಲ್ಲಿ ಪ್ರಯಾಣಿಕರ Samsung M34 ಮೊಬೈಲ್ ಕಳವು ಮಾಡಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಅಕ್ಟೋಬರ್ 13ರಂದು ಇದೇ ವ್ಯಕ್ತಿಯೊಂದಿಗೆ ಸೇರಿ ಪ್ರಯಾಣಿಕರ Apple iPhone 16 Pro Max ಮೊಬೈಲ್ ಕಳವು ಮಾಡಿರುವುದಾಗಿ ಹಾಗೂ ಮಾರ್ಚ್ 6ರಂದು ಬೈಂದೂರು ಸಮೀಪದ ರೈಲ್ವೆ ಬೋಗಿಯಲ್ಲಿ ಪ್ರಯಾಣಿಕರ IQ Z9 ಮೊಬೈಲ್ ಕಳವು ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಬಂಧಿತ ಪ್ರಹ್ಲಾದ್ ವಿರುದ್ಧ ಈ ಹಿಂದೆಯೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಮತ್ತು ದರೋಡೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ, ಕೋಟ ಪೊಲೀಸ್ ಠಾಣೆಯಲ್ಲಿ ಹಾಗೂ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುನಿಲ್ ಕುಮಾರ್ ಬಿ.ವೈ., ಮಹೇಶ್ ಪೂಜಾರಿ ಹಾಗೂ ಸಿಬ್ಬಂದಿಗಳಾದ ಜಯರಾಮ, ಚಿದಾನಂದ ಮತ್ತು ಮಾಲಪ್ಪ ದೇಸಾಯಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಆರೋಪಿಯನ್ನು ಕಾನೂನು ಪ್ರಕಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version