Home Mangalorean News Kannada News ತೊಕ್ಕೊಟ್ಟು: ಪಾದಚಾರಿಗೆ ಢಿಕ್ಕಿ ಹೊಡೆದ ಆಟೊ ರಿಕ್ಷಾ ಪಲ್ಟಿ

ತೊಕ್ಕೊಟ್ಟು: ಪಾದಚಾರಿಗೆ ಢಿಕ್ಕಿ ಹೊಡೆದ ಆಟೊ ರಿಕ್ಷಾ ಪಲ್ಟಿ

Spread the love

ತೊಕ್ಕೊಟ್ಟು: ಪಾದಚಾರಿಗೆ ಢಿಕ್ಕಿ ಹೊಡೆದ ಆಟೊ ರಿಕ್ಷಾ ಪಲ್ಟಿ

ಉಳ್ಳಾಲ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ರಸ್ತೆ ಮಧ್ಯೆ ಉರುಳಿಬಿದ್ದ ಘಟನೆ ತೊಕ್ಕೊಟ್ಟು ರಿಕ್ಷಾ ಪಾರ್ಕ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.

ಘಟನೆಯಿಂದ ಪಾದಚಾರಿ ಕಾಪಿಕಾಡು ನಿವಾಸಿ ಚಂದ್ರಶೇಖರ್(62) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಂದ್ರಶೇಖರ್ ತೊಕ್ಕೊಟ್ಟುವಿನ ನಂದಿನಿ ಪಾರ್ಲರ್ ನಲ್ಲಿ ಹಾಲು ಖರೀದಿಸಿ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ಚಂದ್ರಶೇಖರ್ ರಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾ ಉರುಳಿ ಬಿದ್ದಿದೆ.

ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.


Spread the love

Exit mobile version