Home Mangalorean News Kannada News ಆಗಸ್ಟ್ 12 ರಂದು ಮಣಿಪಾಲದಲ್ಲಿ ತಿರಂಗಾ ಯಾತ್ರೆ – ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ...

ಆಗಸ್ಟ್ 12 ರಂದು ಮಣಿಪಾಲದಲ್ಲಿ ತಿರಂಗಾ ಯಾತ್ರೆ – ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ : ಯಶ್ಪಾಲ್ ಸುವರ್ಣ

Spread the love

ಆಗಸ್ಟ್ 12 ರಂದು ಮಣಿಪಾಲದಲ್ಲಿ “ತಿರಂಗಾ ಯಾತ್ರೆ” ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ : ಯಶ್ಪಾಲ್ ಸುವರ್ಣ

ಉಡುಪಿ: ಭಾರತ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಭಾಗದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ 12 ಬುಧವಾರ ಮಧ್ಯಾಹ್ನ 3.30ಕ್ಕೆ “ತಿರಂಗಾ ಯಾತ್ರೆ” ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಬುಧವಾರ ಮಧ್ಯಾಹ್ನ 3.30ಕ್ಕೆ ಮಣಿಪಾಲ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಮುಂಭಾಗದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರದ ವಿವಿಧ ಗಣ್ಯರು ತಿರಂಗಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ತಿರಂಗಾ ಯಾತ್ರೆ ಮಣಿಪಾಲ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಮುಂಭಾಗದಿಂದ ಆರಂಭಗೊಂಡು ಟೈಗರ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಕಾಯಿನ್ ಸರ್ಕಲ್ ಬಳಿ ಸಮಾಪನಗೊಳ್ಳಲಿದೆ.

ಸಾರ್ವಜನಿಕರು, ದೇಶಭಕ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.


Spread the love

Exit mobile version