ಟ್ರಾಫಿಕ್ ಕೇಸ್‌: ದಂಡದಲ್ಲಿ ಶೇ. 50 ರಿಯಾಯಿತಿ

Spread the love

ಟ್ರಾಫಿಕ್ ಕೇಸ್‌: ದಂಡದಲ್ಲಿ ಶೇ. 50 ರಿಯಾಯಿತಿ

ಮಂಗಳೂರು : ರಾಜ್ಯ ಸರಕಾರದ ಆದೇಶದಂತೆ ಸಾರಿಗೆ ಇಲಾಖೆಯಲ್ಲಿ 1991ರಿಂದ 2025ರವರೆಗಿನ ಅವಧಿಯಲ್ಲಿ ದಾಖಲಾಗಿರುವ ಹಾಗೂ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಲಾಗಿದೆ.

ಈ ವಿಶೇಷ ರಿಯಾಯಿತಿಯನ್ನು ಮುಂದಿನ ರಾಷ್ಟ್ರೀಯ ಲೋಕ ಅದಾಲತ್‌ನ ಅಂಗವಾಗಿ ಸಾರ್ವಜನಿಕರ ಅನುಕೂಲ ಕ್ಕಾಗಿ ಜಾರಿಗೆ ತರಲಾಗಿದೆ. ಅದರಂತೆ 2026ರ ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಬಾಕಿ ಇರುವ ಅರ್ಹ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗುತ್ತದೆ. ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿ ದಂತೆ ಬಾಕಿ ಉಳಿದಿರುವ ದಂಡದ ಮೊತ್ತವನ್ನು ಪಾವತಿಸಲು ಕಾಯುತ್ತಿರುವ ವಾಹನ ಮಾಲಕರು ಹಾಗೂ ಚಾಲಕರಿಗೆ ಇದು ಉತ್ತಮ ಅವಕಾಶವಾಗಿದೆ.

ಆದ್ದರಿಂದ ಸಾರ್ವಜನಿಕರು ಈ ವಿಶೇಷ ರಿಯಾುತಿಯ ಸದುಪಯೋಗ ಪಡೆದುಕೊಂಡು, ತಮ್ಮ ವಾಹನಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಹ ಇ-ಚಲನ್ ಪ್ರಕರಣಗಳ ದಂಡವನ್ನು ಶೇ.50ರಷ್ಟು ರಿಯಾಯಿತಿಯಲ್ಲಿ ಪಾವ ತಿಸುವ ಮೂಲಕ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments