ಸಾಲ ಹಣ ಹಿಂತಿರುಗಿಸುವ ನೆಪದಲ್ಲಿ ಮನೆಗೆ ಬಂದು ಚಿನ್ನಾಭರಣ ಕಳವು: ಇಬ್ಬರ ಬಂಧನ

Spread the love

ಸಾಲ ಹಣ ಹಿಂತಿರುಗಿಸುವ ನೆಪದಲ್ಲಿ ಮನೆಗೆ ಬಂದು ಚಿನ್ನಾಭರಣ ಕಳವು: ಇಬ್ಬರ ಬಂಧನ

ಸುಳ್ಯ: ಸಾಲದ ಹಣ ಹಿಂತಿರುಗಿಸುವ ನೆಪದಲ್ಲಿ ಮನೆಗೆ ಬಂದ ಮಹಿಳೆ ಚಿನ್ನಾಭರಣ ಕಳವು ಮಾಡಿರುವ ಘಟನೆ ಸುಳ್ಯ ಕಸಬಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಪ್ರಕರಣದ ಪಿರ್ಯಾದಿದಾರರಾದ ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ (20) ಅವರ ದೂರಿನಂತೆ, ಅವರ ತಂದೆಗೆ ಆರೋಪಿತೆಯಾದ ಶೃತಿ @ ವಿಶ್ಮೀತ (37) ಎಂಬಾಕೆಯೊಂದಿಗೆ ಪರಿಚಯವಿದ್ದು, ಆಕೆಗೆ ಸುಮಾರು 6 ಲಕ್ಷ ರೂ. ಸಾಲವಾಗಿ ನೀಡಲಾಗಿತ್ತು. ಬಳಿಕ ಪಿರ್ಯಾದಿದಾರರು ಹಣವನ್ನು ಹಿಂತಿರುಗಿಸುವಂತೆ ಕೇಳಿದ ಹಿನ್ನೆಲೆಯಲ್ಲಿ, ಆರೋಪಿತೆ ಹಣವನ್ನು ನೀಡುವುದಾಗಿ ಒಪ್ಪಿಕೊಂಡು ಏಪ್ರಿಲ್ 7, 2026 ರಂದು ಅವರ ಮನೆಗೆ ಬಂದಿದ್ದಳು.

ಆ ಸಮಯದಲ್ಲಿ ಪಿರ್ಯಾದಿದಾರರು ಕೆಲಸಕ್ಕೆ ತೆರಳಿದ್ದರು. ರಾತ್ರಿ ಮನೆಗೆ ಮರಳಿದಾಗ ಕಪಾಟಿನ ಬೀಗದ ಕೀ ಬಿದ್ದಿರುವುದನ್ನು ಗಮನಿಸಿ ಪರಿಶೀಲಿಸಿದಾಗ, ಮನೆಯಲ್ಲಿದ್ದ ಸುಮಾರು ₹5,00,000 ಮೌಲ್ಯದ 62½ ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 49/2026, ಕಲಂ 331(3), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖೆ ನಡೆಸಿದ ಪೊಲೀಸರು ಆರೋಪಿತೆ ಶೃತಿ @ ವಿಶ್ಮೀತ ಹಾಗೂ ಕೃತ್ಯಕ್ಕೆ ಸಹಕರಿಸಿದ ಪ್ರದೀಪ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ, ಕಳವಾದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments