ಹದಗೆಟ್ಟ ದಾರಿದೀಪ, ಹೈಮಾಸ್ಟ್ ದೀಪಗಳ ದುರಸ್ತಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಡಿಸಿಗೆ ಮನವಿ

Spread the love

ಹದಗೆಟ್ಟ ದಾರಿದೀಪ, ಹೈಮಾಸ್ಟ್ ದೀಪಗಳ ದುರಸ್ತಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಡಿಸಿಗೆ ಮನವಿ

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ ಮತ್ತು ಹೈಮಾಸ್ಟ್ ಲೈಟ್ಗಳನ್ನು ದುರಸ್ತಿಪಡಿಸಿ ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.

ನಗರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ದಾರಿದೀಪಗಳು ಹಾಗೂ ಹೈಮಾಸ್ಟ್ ಲೈಟ್ಗಳು ಹದಗೆಟ್ಟಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವಂತೆ ಸಮಸ್ತ ನಾಗರಿಕರ ಪರವಾಗಿ ಜಿಲ್ಲಾಡಳಿತವನ್ನು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಮೀನಾಕ್ಷಿ ಮಾಧವ ಬನ್ನಂಜೆ, ಗಣೇಶ್ ನೆರ್ಗಿ, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್ರಾಜ್, ಭರತ್ ಕುಮಾರ್, ರಮೇಶ್ ಪಾಲ್ ಹಾಗೂ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.


Spread the love
Subscribe
Notify of

0 Comments