ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಗಣತಿ ನಮೂನೆ ಭರ್ತಿಗೆ ಸಹಾಯ ಕೇಂದ್ರ ಆರಂಭ

Spread the love

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಗಣತಿ ನಮೂನೆ ಭರ್ತಿಗೆ ಸಹಾಯ ಕೇಂದ್ರ ಆರಂಭ

ಉಡುಪಿ: ರಾಜ್ಯದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅಂಗವಾಗಿ, ಮತದಾರರಿಗೆ ಗಣತಿ ನಮೂನೆ (Enumeration Form) ಭರ್ತಿ ಮಾಡಲು ನೆರವು ನೀಡುವ ಉದ್ದೇಶದಿಂದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಗಣತಿ ನಮೂನೆ ಭರ್ತಿ ಸಹಾಯ ಕೇಂದ್ರವನ್ನು ಆರಂಭಿಸಲಾಯಿತು.

ಸಹಾಯ ಕೇಂದ್ರಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರಿಗೆ ಯಾವುದೇ ಗೊಂದಲವಾಗದಂತೆ ಗಣತಿ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಲು ಸಹಕಾರ ನೀಡುವುದು ಸಹಾಯ ಕೇಂದ್ರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಸೇರಿದಂತೆ ಪಕ್ಷದ ಮುಖಂಡರಾದ ಮಹಾಬಲ ಕುಂದರ್, ನಾಗೇಶ್ ಉದ್ಯಾವರ, ಜಯಕುಮಾರ್, ಮಮತಾ ಶೆಟ್ಟಿ, ಸತೀಶ್ ಕುಮಾರ್ ಮಂಚಿ, ಸತೀಶ್ ಕೊಡವೂರು, ಸಜ್ಜನ್ ಶೆಟ್ಟಿ, ಲಕ್ಷ್ಮಣ ಪೂಜಾರಿ, ಶರತ್ ಶೆಟ್ಟಿ, ಸಂಧ್ಯಾ ತಿಲಕ್ ರಾಜ್, ಸಂಜಯ್ ಆಚಾರ್ಯ, ಲಕ್ಷ್ಮೀಶ್ ಶೆಟ್ಟಿ, ಸುಧಾಕರ್ ಕನ್ನರ್ಪಾಡಿ ಹಾಗೂ ವಿಲ್ಸನ್ ಸಿಕ್ವೇರಾ ಉಪಸ್ಥಿತರಿದ್ದರು.


Spread the love
Subscribe
Notify of

0 Comments