Spread the love
ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಮನೋಜ್ ಕರ್ಕೇರಾ ನೇಮಕ ಆದೇಶಕ್ಕೆ ತಡೆ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಮನೋಜ್ ಎಸ್ ಕರ್ಕೇರಾ ಅವರನ್ನು ಆಗಸ್ಟ್ 14 ರಂದು ಮಾಡಲಾಗಿದ್ದು ಈ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿದು ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಎಂ ನಾರಾಯಣ ಸ್ವಾಮಿ ಆದೇಶ ಹೊರಡಿಸಿದ್ದಾರೆ.
ಮುಂದಿನ ಆದೇಶದ ವರೆಗೆ ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಅಮೀನ್ ಅವರೇ ಉಡುಪಿ ಜಿಲ್ಲಾ ಮೀನುಗಾರರ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲು ಆದೇಶದಲ್ಲಿ ತಿಳಿಸಲಾಗಿದೆ.
Spread the love













