ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಗ್ರಸ್ಥಾನ ಪಡೆದ ಉಡುಪಿ ಜಿಲ್ಲೆ : ರಮೇಶ್ ಕಾಂಚನ್ ಹರ್ಷ

Spread the love

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಗ್ರಸ್ಥಾನ ಪಡೆದ ಉಡುಪಿ ಜಿಲ್ಲೆ : ರಮೇಶ್ ಕಾಂಚನ್ ಹರ್ಷ

ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶವು ಬಿಡುಗಡೆಯಾಗಿದ್ದು ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯು ತನ್ನ ಅಗ್ರಸ್ಥಾನವನ್ನು ಬಿಟ್ಟುಕೊಡದೇ ಶೇ. 96.39ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆಯಲು ಸಹಕರಿಸಿದ್ದಾರೆ. ಕಲೆ, ಸಂಸ್ಕೃತಿ ಹಾಗೂ ಧಾರ್ಮಿಕತೆಯ ಮುಂದಿರುವ ಉಡುಪಿ ಜಿಲ್ಲೆಯು ಶೈಕ್ಷಣಿಕ ವಿಭಾಗದಲ್ಲೂ ಕೂಡ ತಮ್ಮ ಅಗ್ರಸ್ಥಾನವನ್ನು ವರ್ಷಂಪ್ರತಿ ಕಾಪಾಡುತ್ತ ಬಂದಿದೆ.

ಓದಿಗಾಗಿ ತಮ್ಮ ಅಮೂಲ್ಯ ಸಮಯವನ್ನು ಮೀಸಲಿಟ್ಟು ಅತ್ಯದ್ಭುತ ಸಾಧನೆಯನ್ನು ಮಾಡಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತಾ ಅವರ ಮುಂದಿನ ಶೈಕ್ಷಣಿಕ ಜೀವನವು ಉತ್ತಮ ಯಶಸ್ಸನ್ನು ಕಾಣಲಿ ಹಾಗೂ ಅವರನ್ನು ಪ್ರೋತ್ಸಾಹಿಸಿದ ಪೋಷಕರಿಗೆ ಹಾಗೂ ಉತ್ತಮ ವಿದ್ಯಾಭ್ಯಾಸವನ್ನು ಕಲ್ಪಿಸಿದ ಶಿಕ್ಷಣ ಇಲಾಖೆಯ ಎಲ್ಲಾ ವರ್ಗದ ಶಿಕ್ಷಕರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.


Spread the love