Home Mangalorean News Kannada News ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ

Spread the love

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ

ಉಡುಪಿ: ಇತ್ತೀಚೆಗೆ ನ್ಯಾಯಯುತವಾದ ಹೋರಾಟಕ್ಕಿಳಿದ ವಿದ್ಯಾರ್ಥಿಗಳ ಮೇಲೆ ದೆಹಲಿಯಲ್ಲಿ ನಡೆದ ಕ್ರೌರ್ಯವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಅಶ್ವಿನ್ ಕೋಟ್ಯಾನ್ ತೀವ್ರವಾಗಿ ಖಂಡಿಸಿದ್ದಾರೆ.

ನೀಟ್ ಪರೀಕ್ಷೆಯು ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸುವ ಹಂತ. ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಂರಕ್ಷಣೆ ಸರಕಾರದ ಜವಾಬ್ದಾರಿಯಾಗಿದ್ದು ಈ ಗೌಪ್ಯತೆಯನ್ನು ಕಾಪಾಡುವ ವಿಷಯದಲ್ಲಿ ಸರಕಾರವು ಸಂಪೂರ್ಣವಾಗಿ ವಿಫಲವಾಗಿದೆ. ಕೆಲವು ಪ್ರತಿಭಾವಂತ ವಿದ್ಯಾರ್ಥಿಗಳು ಇದರಿಂದ ನಿರಾಶೆಗೊಂಡು ನೊಂದುಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಕಾರದ ಈ ವರ್ತನೆಯನ್ನು ಖಂಡಿಸಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಯುವಜನರ ಸಂವಿಧಾನಾತ್ಮಕ ಹಕ್ಕನ್ನು ಸರಕಾರವು ಹತ್ತಿಕ್ಕಲು ಪ್ರಯತ್ನಿಸಿರುವುದು ದುರಂತದ ವಿಚಾರ. ಈ ವಿಷಯದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿರುತ್ತಾರೆ. ಕೇಂದ್ರ ಸರಕಾರದ ಈ ಬೇಜವಾಬ್ದಾರಿತನವು ಹೀಗೆ ಮುಂದುವರಿದಲ್ಲಿ ಇದರ ವಿರುದ್ಧ ಯುವಕರು ಸಂಘಟಿತರಾಗಿ ದೇಶದಾದ್ಯಂತ ಪ್ರತಿಭಟಿಸಬೇಕಾಗುತ್ತದೆ. ಸರಕಾರವು ಯುವಜನರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕೆಂದು ಅವರು ಒತ್ತಾಯಿಸಿರುತ್ತಾರೆ.


Spread the love

Exit mobile version