ದೆಹಲಿ ಪ್ರತಿಭಟನಾನಿರತ ಮಹಿಳೆಯರಿಗೆ ದೌರ್ಜನ್ಯ: ಕೇಂದ್ರ ಸರ್ಕಾರದ ವಿರುದ್ಧ ಜ್ಯೋತಿ ಹೆಬ್ಬಾರ್ ಆಕ್ರೋಶ
ಉಡುಪಿ: ಎಸ್ ಐ ಆರ್ ಅಕ್ರಮಗಳ ಮೂಲಕ ಭಾರತೀಯರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಆರೋಪವನ್ನು ಹೊತ್ತಿರುವ ಚುನಾವನಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಅಗ್ರಹಿಸಿ ದೆಹಲಿಯಲ್ಲಿ ಯುವ ಜನರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಯಲ್ಲಿ ಮಹಿಳಾ ಹೋರಾಟಗಾರ್ತಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯವು ಖಂಡನೀಯ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತದಾನವು ಪ್ರತಿಯೊಬ್ಬ ಭಾರತೀಯನಿಗೂ ಸಂವಿಧಾನ ನೀಡಿದ ಹಕ್ಕಾಗಿದೆ. ಎಸ್ ಐ ಆರ್ ಜಾರಿಗೊಳಿಸುವ ಮೂಲಕ ಫಾರ್ಮ್ 6, ಫಾರ್ಮ್ 7 ಮೂಲಕ ಸಂವಿಧಾನ ನೀಡಿದ ಹಕ್ಕನ್ನು ಚುನಾವನಾ ಆಯುಕ್ತರು ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಚುನಾವಣಾ ಆಯುಕ್ತರ ಪ್ರಜಾಪ್ರಭುತ್ವ ವಿರೋಧಿ ನೀತಿಯ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ಯುವ ಜನರು, ವಿದ್ಯಾರ್ಥಿನಿಯರು, ಮಹಿಳಾ ಪತ್ರಕರ್ತೆಯರ ಮೇಲೆ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಕುಮ್ಮಕ್ಕಿನಿಂದ ದೆಹಲಿ ಪೊಲೀಸರು ನಡೆಸುತ್ತಿರುವ ದೌರ್ಜನ್ಯವನ್ನು ಎಷ್ಟು ಮಾತ್ರಕ್ಕೂ ಸಹಿಸಲು ಸಾಧ್ಯವಿಲ್ಲ.
ಪ್ರತಿಭಟನಾ ನಿರತ ಮಹಿಳೆಯರ ಮೇಲೆ ಅನಾಗರಿಕ ವರ್ತನೆ ತೋರುತ್ತಿರುವ ದೆಹಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಮಹಿಳಾ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ಧಾಖಲಿಸಬೇಕು. ಹಾಗೂ ಪ್ರತಿಭಟನಾ ನಿರತ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ನೀಡಬೇಕು.
ಬಾಯಿ ತೆರೆದರೆ ಭೇಟಿ ಬಚಾವೋ, ಭೇಟಿ ಪಡಾವೋ, ನಾರಿ ಸಮ್ಮಾನ್ ಎಂದು ಆಕರ್ಷಕ ಪದಪುಂಜಗಳನ್ನು ಉಲಿಯುವ ಮೋಧಿಯವರೇ ನಿಮ್ಮ ಕಣ್ಣೆದುರೇ ಮಹಿಳಾ ದೌರ್ಜನ್ಯ ನಡೆಯುತ್ತಿರುವುದು ನಿಮಗೆ ಕಾಣಿಸುತ್ತಿಲ್ಲವೇ? ಕೇಂದ್ರ ಬಿಜೆಪಿ ಸರ್ಕಾರದ ಮಹಿಳಾ ವಿರೋದಿ ನೀತಿಗೆ ಯುವ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಭ್ರಷ್ಟ ಚುನಾವಣಾ ಆಯುಕ್ತರನ್ನು ರಕ್ಷಿಸಲು ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.













