ಮರಳು ಓವರ್ ಲೋಡಿಂಗ್ ವಿರುದ್ಧ ಉಡುಪಿ ಪೊಲೀಸರ ಕಾರ್ಯಾಚರಣೆ; 13 ವಾಹನ ವಶ

Spread the love

ಮರಳು ಓವರ್ ಲೋಡಿಂಗ್ ವಿರುದ್ಧ ಉಡುಪಿ ಪೊಲೀಸರ ಕಾರ್ಯಾಚರಣೆ; 13 ವಾಹನ ವಶ

ಉಡುಪಿ: ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್ಲೋಡಿಂಗ್) ಮಾಡಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ವಿರುದ್ಧ ಉಡುಪಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 13 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಏಪ್ರಿಲ್ 25 ರಂದು ಹಮ್ಮಿಕೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು ಸುಮಾರು 13 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ವಶಪಡಿಸಿಕೊಂಡ ಎಲ್ಲಾ ವಾಹನಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ (ಮೈನ್ಸ್ ಅಂಡ್ ಜಿಯಾಲಜಿ) ಇಲಾಖೆಗೆ ಹಸ್ತಾಂತರಿಸಲಾಗಿದೆ.

ಅಕ್ರಮ ಮರಳು ಸಾಗಾಣಿಕೆ ತಡೆಗೆ ಮುಂದೆಯೂ ಇಂತಹ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments