ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿಗೆ ವೀರ ವನಿತೆ-2026 ಪ್ರಶಸ್ತಿ

Spread the love

ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿಗೆ ವೀರ ವನಿತೆ-2026 ಪ್ರಶಸ್ತಿ

ಬೆಂಗಳೂರಿನ‌ ಚಿತ್ರಸಂತೆ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ “ವೀರವನಿತೆ 2026” ವರ್ಷದ ಮಹಿಳೆ ಪ್ರಶಸ್ತಿಗೆ ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿ ಆಯ್ಕೆಯಾಗಿದ್ದು, ಮಾರ್ಚ್ 6 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಖ್ಯಾತ ಚಲನಚಿತ್ರ ತಾರ ಅನುರಾದ ಪ್ರಶಸ್ತಿ ಪ್ರದಾನ ಮಾಡಿದರು. ವೀಣಾ ಶೆಟ್ಟಿ ಅವರು ಸುಮಾರು ಮೂವತ್ತು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಹೀಗೆ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾರಂಭದಲ್ಲಿ ಚಿತ್ರಸಂತೆ ಸಂಸ್ಥೆಯ ಪ್ರಮುಖರಾದ ಅರುಣ್ ಕುಮಾರ್ ಹಾಗೂ‌ ಮತ್ತಿತರರು‌ ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments