ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತಪಾತಕಿ ರವಿ ಪೂಜಾರಿಗೆ ಅನುಮತಿ

Spread the love

ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತಪಾತಕಿ ರವಿ ಪೂಜಾರಿಗೆ ಅನುಮತಿ

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿಗೆ ಉಡುಪಿಯ ಸ್ವಗ್ರಾಮಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ.

ನ್ಯಾಯಾಲಯದ ಆದೇಶದಂತೆ ಆರೋಪಿ ರವಿ ಪೂಜಾರಿಯನ್ನು ಶುಕ್ರವಾರ ಮಧ್ಯಾಹ್ನ ಪೊಲೀಸ್ ಎಸ್ಕಾರ್ಟ್ ಭದ್ರತೆಯಲ್ಲಿ ಉಡುಪಿಗೆ ಕರೆತರಲಾಗುತ್ತದೆ. ನವೆಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಮಲ್ಪೆಯಲ್ಲಿ ನಿಗದಿಯಾಗಿರುವ ತಾಯಿಯ ಅಂತ್ಯಕ್ರಿಯೆ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಬಳಿಕ ಆತನನ್ನು ಮತ್ತೆ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.

ರವಿ ಪೂಜಾರಿಯನ್ನು ಉಡುಪಿಗೆ ಕರೆತರಲು ಅಗತ್ಯ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಕಲ್ಪಿಸುವಂತೆ ಬೆಂಗಳೂರಿನ ಆಡುಗೋಡಿಯ ಸಿಟಿ ಆರ್ಮ್ಡ್ ರಿಸರ್ವ್ (ದಕ್ಷಿಣ) ವಿಭಾಗದ ಡಿಸಿಪಿ ಹಾಗೂ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಬೆಂಗಳೂರಿನ ಜೈಲು ಇಲಾಖೆಯ ವತಿಯಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಹೆಚ್ಚುವರಿಯಾಗಿ ಉಡುಪಿ ಜಿಲ್ಲಾ ಪೊಲೀಸರಿಂದ ಸ್ಥಳೀಯ ಭದ್ರತೆ ಒದಗಿಸಲಾಗುತ್ತದೆ. ಎಸ್ಕಾರ್ಟ್ ವ್ಯವಸ್ಥೆಗೆ ತಗಲುವ ಸಂಪೂರ್ಣ ವೆಚ್ಚವನ್ನು ರವಿ ಪೂಜಾರಿಯೇ ಭರಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.


Spread the love
Subscribe
Notify of

0 Comments