ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಲಾಂಛನ ಅನಾವರಣ

Spread the love

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಲಾಂಛನ ಅನಾವರಣ

ಉಡುಪಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ 2026ರ ಲಾಂಛನವನ್ನು ಶಾಸಕ ಯಶ್ಪಾಲ್ ಸುವರ್ಣ ಗುರುವಾರ ದೇವಸ್ಥಾನದಲ್ಲಿ ಅನಾವರಣಗೊಳಿಸಿದರು.

ಬಳಿಕ ಮಾತನಾಡಿ, ಮುಂದಿನ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದಲ್ಲಿ ಒಮ್ಮತದಿಂದ ಕೆಲಸ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಲ್ಲಿ ಸಹಕರಿಸಬೇಕು. ಶಾಸಕನ ನೆಲೆಯಲ್ಲಿ ತಾನು ಪೂರ್ಣ ಸಹಕಾರವನ್ನು ನೀಡುವುದಾಗಿ ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಜನಸಾಮಾನ್ಯರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವಲ್ಲಿ ದೇವಸ್ಥಾನಗಳ ಪಾತ್ರ ಮಹತ್ವದಾಗಿದೆ. ಗ್ರಾಮದ ಎಲ್ಲ ವರ್ಗದ ಜನರು ದೇಗುಲದ ಸಮಗ್ರ ಅಭಿವೃದ್ಧಿಯಲ್ಲಿ ತೊಡಗಿಸಿ ಕೊಳ್ಳವಂತಾಗಬೇಕು ಎಂದರು.

ಮಾಜಿ ಶಾಸಕ ಕೆ. ರಘುಪತಿ ಭಟ್, ಉಡುಪಿ ಉಜ್ವಲ್ ಡೆವಲಪರ್ಸ್ ನ ಅಜಯ್ ಪಿ. ಶೆಟ್ಟಿ ಜಿಲ್ಲಾ ಸಹಕಾರಿ ಮಹಾಮಂಡಲದ ನಿರ್ದೇಶಕ ಜಯಕರ ಶೆಟ್ಟಿ ಉಡುಪಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಮಾಂಡವಿ ಬಿಲ್ಡರ್ಸ್ ನ ಗ್ಲೆನ್ ಡಯಾಸ್, ಮತ್ತೋದ್ಯಮಿ ನಾಗರಾಜ ಸುವರ್ಣ, ಉಡುಪಿ ಕೀರ್ತಿ ಕನ್ಸ್ ಸ್ಟ್ರಕ್ಷನ್ ವ್ಯವಸ್ಥಾಪಕ ನಿರ್ದೇಶಕ ಸುಧೀರ್ ಶೆಟ್ಟಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ, ನ್ಯಾಯವಾದಿ ವಾಣಿ ವಿ. ರಾವ್, ಶಿವಸಾಗರ್ ಗ್ರೂಪ್ ಮುಖ್ಯಸ್ಥ ಪ್ರಭಾಕರ ಪೂಜಾರಿ, ದೇವಸ್ಥಾನದ ಪ್ರಧಾನ ತಂತ್ರಿ ಶಶಿಕಾಂತ ತಂತ್ರಿ, ಎಂಟು ಮಾಗಣೆಯ ಮುಖ್ಯಸ್ಥರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ನಿರೂಪಿಸಿ, ವಂದಿಸಿದರು


Spread the love
Subscribe
Notify of

0 Comments
Inline Feedbacks
View all comments