ವಿದ್ಯೋದಯ ವಿದ್ಯಾರ್ಥಿನಿಗೆ ರಾಷ್ಟ್ರಮಟ್ಟದ ಸ್ಪೆಲ್ ಬಿ ಸ್ಪರ್ಧೆಯಲ್ಲಿ 14ನೇ ರ್ಯಾಂಕ್
ಉಡುಪಿ: ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ನ 9ನೇ ತರಗತಿ ವಿದ್ಯಾರ್ಥಿನಿ ಕು. ಫಾತಿಮ ಶಿಝಾ ಅಲಿ ಅವರು ವಿಜ್ ಇಂಟರ್ನ್ಯಾಷನಲ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಸ್ಪೆಲ್ ಬಿ (Spell Bee) ಸ್ಪರ್ಧೆಯಲ್ಲಿ 14ನೇ ರ್ಯಾಂಕ್ ಗಳಿಸಿ ಶಾಲೆ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಕು. ಫಾತಿಮ ಶಿಝಾ ಅಲಿ ಅವರು ಕಾಂಗ್ರೆಸ್ ಮುಖಂಡ ಹಾಗೂ ಹಿರಿಯ ನ್ಯಾಯವಾದಿ ಹಬೀಬ್ ಅಲಿ ಮತ್ತು ಉಡುಪಿ ತಾಲೂಕು ಪಂಚಾಯತ್ನ ಸಹಾಯಕ ನಿರ್ದೇಶಕಿ ಶ್ರೀಮತಿ ಫರ್ಝನಾ ಎಂ. ಅವರ ಪುತ್ರಿಯಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ, ಪೋಷಕರು ಹಾಗೂ ವಿವಿಧ ಗಣ್ಯರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
