ಕುಂದಾಪುರ – ಬಸ್ರೂರು ಭಾಗಕ್ಕೆ ಹೆಚ್ಚುವರಿ ಸರ್ಕಾರಿ ಬಸ್ಸು ಸೇವೆಗೆ ವಿಕಾಸ್ ಹೆಗ್ಡೆ ಆಗ್ರಹ

Spread the love

ಕುಂದಾಪುರ – ಬಸ್ರೂರು ಭಾಗಕ್ಕೆ ಹೆಚ್ಚುವರಿ ಸರ್ಕಾರಿ ಬಸ್ಸು ಸೇವೆಗೆ ವಿಕಾಸ್ ಹೆಗ್ಡೆ ಆಗ್ರಹ

ಕುಂದಾಪುರ: ಕುಂದಾಪುರ ಕುಂದಾಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಾದ ಮೂಡ್ಲಕಟ್ಟೆ ಹಾಗೂ ಬಸ್ರೂರು ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಜೆ 3:45ರ ಸುಮಾರಿಗೆ ತರಗತಿ ಮುಗಿಯಲಿದ್ದು ಇವರಿಗೆ ಕುಂದಾಪುರದ ಮೂಲಕ ದೂರದ ಊರುಗಳಿಗೆ ತೆರಳಲು ಸಂಜೆ 4:00 ಗಂಟೆಗೆ ಕೇವಲ ಒಂದು ಸರ್ಕಾರಿ ಬಸ್ಸು ಮಾತ್ರ ಇರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಹೆಚ್ಚುವರಿ ಸರ್ಕಾರಿ ಬಸ್ಸುಗಳ ಸೇವೆಯನ್ನು ಒದಗಿಸಬೇಕು ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

ಶ್ರೀ ಶಾರದಾ ಕಾಲೇಜು ಬಸ್ರೂರಿನ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಐ ಎಂ ಜೆ ಮತ್ತು ಎಂ ಐ ಟಿ ತಾಂತ್ರಿಕ ಮಹಾವಿದ್ಯಾಲಯ ಮೂಡ್ಲಕಟ್ಟೆ ಕಾಲೇಜುಗಳ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಕುಂದಾಪುರದ ಬಿ ಸಿ ಎಂ ಹಾಸ್ಟೆಲ್ನ ವಿದ್ಯಾರ್ಥಿಗಳು ಸರ್ಕಾರಿ ಬಸ್ಸುಗಳನ್ನೇ ಅವಲಂಬಿಸಿದ್ದಾರೆ.

ಇಷ್ಟೊಂದು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಂದೇ ಬಸ್ನಲ್ಲಿ ಪ್ರಯಾಣಿಸುವುದರಿಂದ ತೀವ್ರ ಜನದಟ್ಟಣೆ ಉಂಟಾಗಿ, ವಿದ್ಯಾರ್ಥಿಗಳು ಅಪಾಯಕಾರಿಯಾಗಿ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗುತ್ತಿದೆ. ಇನ್ನೂ 4:00 ಗಂಟೆಯ ಬಸ್ ಸಂಪೂರ್ಣ ಪ್ರಯಾಣಿಕರಿಂದ ತುಂಬಿ ಹೋಗುತ್ತಿದ್ದು ವಿದ್ಯಾರ್ಥಿಗಳಿಗೆ ಬಸ್ ಒಳ ಪ್ರವೇಶ ಕೂಡ ಕಷ್ಟಸಾಧ್ಯ. ಆದರೆ ಈ ಬಸ್ಸು ತಪ್ಪಿಹೋದರೆ ಮುಂದಿನ ಬಸ್ಸು ಬರುವುದು ಸಂಜೆ 4:50 ಕ್ಕೆ.

ಆದುದರಿಂದ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅನುಕೂಲದ ದೃಷ್ಟಿಯಿಂದ ಸಂಜೆ 4:10ರಿಂದ 4:20ರ ನಡುವೆ ಹೆಚ್ಚುವರಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಿದರೆ ನೂರಾರು ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗುತ್ತದೆ. ಈ ಸಮಸ್ಯೆಯನ್ನು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.


Spread the love
Subscribe
Notify of

0 Comments