ವಿಟ್ಲ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮೂವರು ಆರೋಪಿಗಳ ಬಂಧನ
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಆರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
2026ರ ಫೆಬ್ರವರಿಯಿಂದ ಆಗಸ್ಟ್ವರೆಗಿನ ಅವಧಿಯಲ್ಲಿ ಜವಾದ್, ಶಾಹಿದ್, ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಸೇರಿದಂತೆ ಇತರ ಮೂವರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಂತ್ರಸ್ತ ಬಾಲಕ ಸೆಪ್ಟೆಂಬರ್ 4ರಂದು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.
ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 185/2026ರಿಂದ 190/2026ರವರೆಗೆ ಒಟ್ಟು ಆರು ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಕಾಯ್ದೆ 2012ರ ಕಲಂ 4(2), 5(m), 6 ಹಾಗೂ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪೈಕಿ ಜವಾದ್, ಶಾಹಿದ್ ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಎಂಬ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
