ವಿಟ್ಲ:  ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೊ ಪ್ರಕರಣ ದಾಖಲು

Spread the love

ವಿಟ್ಲ:  ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೊ ಪ್ರಕರಣ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಯೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದ ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬ ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ.

2025ರ ಡಿಸೆಂಬರ್ 21ರಂದು ಬಾಲಕನು ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

2026ರ ಸೆಪ್ಟೆಂಬರ್ 8ರಂದು ಅಪ್ರಾಪ್ತ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಸೆಪ್ಟೆಂಬರ್ 9ರಂದು ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳದ ಆಧಾರದ ಮೇಲೆ ಪ್ರಕರಣವನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments