ವಿಟ್ಲ | ಪತ್ನಿಯನ್ನು ಕೊಲೆಗೈದ ಪ್ರಕರಣ; ಆರೋಪಿ ಪತಿಗೆ ಜೈಲುಶಿಕ್ಷೆ, ದಂಡ

Spread the love

ವಿಟ್ಲ | ಪತ್ನಿಯನ್ನು ಕೊಲೆಗೈದ ಪ್ರಕರಣ; ಆರೋಪಿ ಪತಿಗೆ ಜೈಲುಶಿಕ್ಷೆ, ದಂಡ

ಮಂಗಳೂರು : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಎಂಬಲ್ಲಿ 2024ರ ಡಿಸೆಂಬರ್ 11ರಂದು ಪತ್ನಿಯನ್ನು ಕೊಂದು ಹಾರ್ಟ್ ಅಟ್ಯಾಕ್‌ನಿಂದ ಬಿದ್ದು ಮೃತಪಟ್ಟಿರುವುದಾಗಿ ಸುಳ್ಳು ಹೇಳಿ ಬಳಿಕ ಕೊಲೆಗೈದಿರುವುದಾಗಿ ತಪ್ಪೊಪ್ಪಿಕೊಂಡಿದ್ದ ಆರೋಪಿ ಪತಿ ಸಂಜೀವ ನಾಯ್ಕ್ ಎಂಬಾತನಿಗೆ ನ್ಯಾಯಾಲಯವು ಐದು ವರ್ಷದ ಕಠಿಣ ಶಿಕ್ಷೆ ವಿಧಿಸಿದೆ.

ಪತ್ನಿಗೆ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಪತಿ ಸಂಜೀವ ನಾಯ್ಕ್ ನೆರೆಮನೆಯವರಿಗೆ ತಿಳಿಸಿ ಆಸ್ಪತ್ರೆಗೆ ದಾಖಲಿ ಸಿದ್ದ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಮಹಿಳೆಯ ಮೃತದೇಹದಲ್ಲಿ ಗಾಯಗಳಿರು ವುದನ್ನು ಕಂಡ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದರು. ಅದರಂತೆ ವಿಟ್ಲ ಠಾಣೆಯಲ್ಲಿ ಸಂಶಯಾಸ್ಪದ ಮರಣ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸ್ ನಿರೀಕ್ಷಕ ನಾಗರಾಜ್ ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮೃತ ಮಹಿಳೆಯ ಪತಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ನಡೆಸಿದ ಮಂಗಳೂರಿನ 2 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಆರೋಪಿಗೆ ಸೆ.105 ಪಾರ್ಟ್ 2 ಅಡಿ 5 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದರೆ 6 ತಿಂಗಳು ಜೈಲು ವಿಧಿಸಿದ್ದಾರೆ. ಸೆ. 240 ಅಡಿ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಅದೇಶಿಸಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕಿ ಜ್ಯೋತಿ ನಾಯ್ಕ್ ವಾದ ಮಂಡಿಸಿದ್ದರು.


Spread the love
Subscribe
Notify of

0 Comments