ವಿಟ್ಲ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಶಾಲಾ ಬಸ್; ಅಪಾಯದಿಂದ ಪಾರಾದ ವಿದ್ಯಾರ್ಥಿಗಳು

Spread the love

ವಿಟ್ಲ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಶಾಲಾ ಬಸ್; ಅಪಾಯದಿಂದ ಪಾರಾದ ವಿದ್ಯಾರ್ಥಿಗಳು

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.

ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್ ಕುಂಟುಕುಡೇಲು ಇಳಿಜಾರಿನ ರಸ್ತೆಯಲ್ಲಿ ಯಾಂತ್ರಿಕ ದೋಷದಿಂದ ನೇರವಾಗಿ ಕೆಳಗಡೆ ಚಲಿಸಿ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದ್ದು, ಬಸ್ಸಿನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.


Spread the love
Subscribe
Notify of

0 Comments