ವಿಟ್ಲ | ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
ವಿಟ್ಲ: ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ.
ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ.
ಬೆಳಗಿನ ಜಾವ ಈ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿದ್ದ ಲಿತಿನ್ ಅವರನ್ನು ಸ್ಥಳೀಯರು ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.
