ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಪ್ರಕರಣ; ಆರೋಪಿ ಆನಂದ ಸೆರೆ

Spread the love

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಪ್ರಕರಣ; ಆರೋಪಿ ಆನಂದ ಸೆರೆ

ವಿಟ್ಲ: ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ.ಎ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ ‘ಸನಾತನಿ ಸಿಂಹ’ ಎಂಬ ಫೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ್ದ ಬಗ್ಗೆ ವಿಟ್ಲ ಠಾಣೆಯಲ್ಲಿ 2025 ರಲ್ಲಿ ಅ.ಕ್ರ: 131/2025, ಕಲಂ: 353(2) BNS 20233ರಂತೆ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆನಂದ ವಿರುದ್ಧ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದು ಬಂದಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love
Subscribe
Notify of

0 Comments