Home Mangalorean News Kannada News ಕೊಡವೂರು ಬಳಿ ಬಾವಿ ಕುಸಿತ: ಮಣ್ಣಿನಡಿ ಸಿಲುಕಿದ ಕಾರ್ಮಿಕನ ಶವ ಪತ್ತೆ

ಕೊಡವೂರು ಬಳಿ ಬಾವಿ ಕುಸಿತ: ಮಣ್ಣಿನಡಿ ಸಿಲುಕಿದ ಕಾರ್ಮಿಕನ ಶವ ಪತ್ತೆ

Spread the love

ಕೊಡವೂರು ಬಳಿ ಬಾವಿ ಕುಸಿತ: ಮಣ್ಣಿನಡಿ ಸಿಲುಕಿದ ಕಾರ್ಮಿಕನ ಶವ ಪತ್ತೆ

ಉಡುಪಿ: ಕಾಮಗಾರಿ ವೇಳೆ ಬಾವಿ ಕುಸಿದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕ ಮೃತದೇಹವನ್ನು ಸತತ 6 ಗಂಟೆಯ ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ಮೇಲಕ್ಕೆತ್ತಲಾಗಿದೆ,

ಮೃತ ವ್ಯಕ್ತಿಯನ್ನು ಕೊಪ್ಪಳ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ

ಕಾರ್ಕಳ ಸಾಣೂರು ನಿವಾಸಿ ಪ್ರಭಾತ್ ಶೆಟ್ಟಿ ಎಂಬವರು ಮಲ್ಪೆ ಉದ್ದಿನಹಿತ್ಲು ಎಂಬಲ್ಲಿ ಮಧ್ವನಗರ ನಿವಾಸಿ ಚೇತನ್ ಎಂಬವರ ಜಾಗದಲ್ಲಿ ಬಾವಿ ನಿರ್ಮಾಣ ಕೆಲಸಕ್ಕೆಂದು ಕಾರ್ಕಳ ಬಸ್ ನಿಲ್ದಾಣದ ಬಳಿಯಿಂದ ಕೊಪ್ಪಳ ಜಿಲ್ಲೆಯ 5 ಜನ ಕೂಲಿ ಕಾರ್ಮಿಕರನ್ನು ಕರೆತಂದು ಬಾವಿಯಿಂದ ಮಣ್ಣು ತೆಗೆಯುವ ಕೆಲಸ ಮಾಡಿಸಿತ್ತಿದ್ದರು

ಶುಕ್ರವಾರ ಸಂಜೆ 5:00 ಗಂಟೆ ಸುಮಾರಿಗೆ ಕೆಲಸ ಬಿಡುವ ಸಮಯಕ್ಕೆ ರಮೇಶ ಎಂಬಾತ ಬಾವಿಯಲ್ಲಿ ಮಣ್ಣು ತೆಗೆಯುವ ಕೆಲಸ ಮಾಡುತ್ತಿರುವಾಗ ಬಾವಿಯ ದಂಡೆಯ ಮಣ್ಣು ಒಮ್ಮೆಲೆ ಕುಸಿದು ರಮೇಶನ ಮೈಮೇಲೆ ಬಿದ್ದು, ಮಣ್ಣಿನಲ್ಲಿ ಹೂತು ಹೋಗಿರುತ್ತಾನೆ.

ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು‌ಈಶ್ವರ್ ಮಲ್ಪೆ ತಂಡ ಸತತ 6 ಕ್ಕೂ ಅಧಿಕ ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ.

ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.


Spread the love

Exit mobile version