ಕೊಡವೂರು ಬಳಿ ಬಾವಿ ಕುಸಿತ: ಮಣ್ಣಿನಡಿ ಸಿಲುಕಿರುವ ಕಾರ್ಮಿಕ

Spread the love

ಕೊಡವೂರು ಬಳಿ ಬಾವಿ ಕುಸಿತ: ಮಣ್ಣಿನಡಿ ಸಿಲುಕಿರುವ ಕಾರ್ಮಿಕ

ಉಡುಪಿ: ಕಾಮಗಾರಿ ವೇಳೆ ಬಾವಿ ಕುಸಿದ ಪರಿಣಾಮ ಓರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಘಟನೆ ಕೊಡವೂರು ಸಮೀಪ ಶುಕ್ರವಾರ ಸಂಜೆ ನಡೆದಿದೆ.

ಕಾರ್ಕಳ ಸಾಣೂರು ನಿವಾಸಿ ಪ್ರಭಾತ್ ಶೆಟ್ಟಿ ಎಂಬವರು ಮಲ್ಪೆ ಉದ್ದಿನಹಿತ್ಲು ಎಂಬಲ್ಲಿ ಮಧ್ವನಗರ ನಿವಾಸಿ ಚೇತನ್ ಎಂಬವರ ಜಾಗದಲ್ಲಿ ಬಾವಿ ನಿರ್ಮಾಣ ಕೆಲಸಕ್ಕೆಂದು ಕಾರ್ಕಳ ಬಸ್ ನಿಲ್ದಾಣದ ಬಳಿಯಿಂದ ಕೊಪ್ಪಳ ಜಿಲ್ಲೆಯ 5 ಜನ ಕೂಲಿ ಕಾರ್ಮಿಕರನ್ನು ಕರೆತಂದು ಬಾವಿಯಿಂದ ಮಣ್ಣು ತೆಗೆಯುವ ಕೆಲಸ ಮಾಡಿಸಿತ್ತಿದ್ದರು

ಶುಕ್ರವಾರ ಸಂಜೆ 5:00 ಗಂಟೆ ಸುಮಾರಿಗೆ ಕೆಲಸ ಬಿಡುವ ಸಮಯಕ್ಕೆ ರಮೇಶ ಎಂಬಾತ ಬಾವಿಯಲ್ಲಿ ಮಣ್ಣು ತೆಗೆಯುವ ಕೆಲಸ ಮಾಡುತ್ತಿರುವಾಗ ಬಾವಿಯ ದಂಡೆಯ ಮಣ್ಣು ಒಮ್ಮೆಲೆ ಕುಸಿದು ರಮೇಶನ ಮೈಮೇಲೆ ಬಿದ್ದು, ಮಣ್ಣಿನಲ್ಲಿ ಹೂತು ಹೋಗಿರುತ್ತಾನೆ. ಸ್ಥಳದಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಯವರೊಂದಿಗೆ ಸ್ಥಳೀಯ ಸಹಕಾರದಲ್ಲಿ ತುರ್ತು ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

ಘಟನಾ ಸ್ಥಳಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ರಕ್ಷಣಾ ಕಾರ್ಯ ತ್ವರಿತಗತಿಯಲ್ಲಿ ನಡೆಸುವಂತೆ ಸೂಚನೆ ನೀಡಿದರು.


Spread the love
Subscribe
Notify of

0 Comments