Home Mangalorean News Kannada News ಡಿ. 2 ರಿಂದ 11ರ ವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ; 839 ಪ್ರಶ್ನೆಗಳ ಅಂಗೀಕಾರ:...

ಡಿ. 2 ರಿಂದ 11ರ ವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ; 839 ಪ್ರಶ್ನೆಗಳ ಅಂಗೀಕಾರ: ಸಭಾಪತಿ ಸಲೀಂ ಅಹ್ಮದ್

Spread the love

ಡಿ. 2 ರಿಂದ 11ರ ವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ; 839 ಪ್ರಶ್ನೆಗಳ ಅಂಗೀಕಾರ: ಸಭಾಪತಿ ಸಲೀಂ ಅಹ್ಮದ್

ಮಂಗಳೂರು : ಡಿಸೆಂಬರ್ 2ರಿಂದ 11ರವರೆಗೆ ಒಟ್ಟು ಒಂಬತ್ತು ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪರಿಣಾಮಕಾರಿ ವೇದಿಕೆಯಾಗಲಿದೆ ಎಂದು ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದ ಸಿದ್ಧತೆಗಳು, ಚರ್ಚೆಯಾಗಲಿರುವ ಪ್ರಮುಖ ವಿಚಾರಗಳು ಹಾಗೂ ಪ್ರತಿಭಟನೆಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಈ ಬಾರಿಯ ಅಧಿವೇಶನಕ್ಕಾಗಿ ವಿಧಾನಪರಿಷತ್ತಿನಲ್ಲಿ ಒಟ್ಟು 839 ಪ್ರಶ್ನೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 60 ಚುಕ್ಕೆ ಗುರುತಿನ ಹಾಗೂ 779 ಚುಕ್ಕೆ ರಹಿತ ಪ್ರಶ್ನೆಗಳು ಸೇರಿವೆ. ಜೊತೆಗೆ ನಿಯಮ 72ರ ಅಡಿಯಲ್ಲಿ 22 ಗಮನ ಸೆಳೆಯುವ ಸೂಚನೆಗಳು ಹಾಗೂ ನಿಯಮ 330ರ ಅಡಿಯಲ್ಲಿ 17 ಸೂಚನೆಗಳಿಗೆ ಅಂಗೀಕಾರ ನೀಡಲಾಗಿದೆ.

ಉತ್ತರ ಕರ್ನಾಟಕ ಮತ್ತು ದಕ್ಷಿಣ ಕನ್ನಡಕ್ಕೆ ವಿಶೇಷ ಸಮಯ: ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಆದ್ಯತೆ ಮತ್ತು ಸಮಯಾವಕಾಶ ನೀಡಲಾಗುವುದು. ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ಯೆಗಳ ಕುರಿತು ಚರ್ಚಿಸಲು ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ ಮತ್ತು ಪಿ.ವಿ. ಮೋಹನ್ ಅವರು ಮನವಿ ಸಲ್ಲಿಸಿದ್ದು, ಅದಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಅಂಗವಿಕಲರ ಸಮಸ್ಯೆಗಳು, ಶಿಕ್ಷಕರ ಕೊರತೆ ಹಾಗೂ ಸವಲತ್ತುಗಳ ಕುರಿತು ಚರ್ಚಿಸಲು ಸಾನಿಧ್ಯ ಟ್ರಸ್ಟ್ ನಿಯೋಗ ಮನವಿ ಮಾಡಿರುವ ಹಿನ್ನೆಲೆಯಲ್ಲಿ, ಅಧಿವೇಶನದಲ್ಲಿ ಅಂಗವಿಕಲರ ವಿಚಾರವಾಗಿ ವಿಶೇಷ ಚರ್ಚೆಗೆ ಅವಕಾಶ ನೀಡಲಾಗುವುದು. ಇದರೊಂದಿಗೆ ಆಶಾ ಕಾರ್ಯಕರ್ತೆಯರ ಬೇಡಿಕೆ, ಕಬ್ಬು ಬೆಳೆಗಾರರ ಸಂಕಷ್ಟ, ಬರ ಪರಿಸ್ಥಿತಿ ಹಾಗೂ ಕಾರ್ಮಿಕರ ಸಮಸ್ಯೆಗಳ ಮೇಲೂ ಸದನದಲ್ಲಿ ಬೆಳಕು ಚೆಲ್ಲಲಾಗುವುದು ಎಂದರು. ಅಗತ್ಯ ಬಿದ್ದರೆ ತಡರಾತ್ರಿಯವರೆಗೂ ಕಲಾಪ ನಡೆಸಲು ಸಿದ್ಧವಿದ್ದು, ಕಲಾಪ ಸಲಹಾ ಸಮಿತಿ (BAC) ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಡೆಯುವ ವಿವಿಧ ಸಂಘಟನೆಗಳ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ಸಭಾಪತಿಗಳು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದಾಗ ಹೋರಾಟ ನಡೆಸುವುದು ಜನರ ಹಕ್ಕು. ಹೋರಾಟಗಳನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುವುದಿಲ್ಲ. ಪ್ರತಿಭಟನೆಗಾಗಿ ಈಗಾಗಲೇ ಪ್ರತ್ಯೇಕ ಜಾಗ ಮತ್ತು ಸಮಯದ ವ್ಯವಸ್ಥೆ ಕಲ್ಪಿಸಲಾಗಿದೆ” ಎಂದರು. ‌

“ಕಳೆದ ಬಾರಿ 70 ರಿಂದ 80 ಪ್ರತಿಭಟನೆಗಳು ನಡೆದಾಗ ಸರ್ಕಾರ ಸುಮಾರು ಏಳು ಮಂದಿ ಸಚಿವರನ್ನು ನಿಯೋಜಿಸಿ, ಪ್ರತಿಭಟನಾಕಾರರನ್ನು ಭೇಟಿ ಮಾಡಿ ಅವರ ಮನವಿ ಸ್ವೀಕರಿಸಿ ಸದನದ ಗಮನಕ್ಕೆ ತರುವ ಕೆಲಸ ಮಾಡಿತ್ತು. ಈ ಬಾರಿಯೂ ಸಚಿವರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಅಹವಾಲು ಆಲಿಸಲಿದ್ದಾರೆ ಹಾಗೂ ಆ ವಿಚಾರಗಳು ಸದನದಲ್ಲಿ ಚರ್ಚೆಯಾಗುವಂತೆ ನೋಡಿಕೊಳ್ಳಲಾಗುವುದು” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಮಂಗಳೂರಿನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಮಾತ್ರ ಪಾಲ್ಗೊಂಡಿದ್ದರ ಕುರಿತ ಪ್ರಶ್ನೆಗೆ ಉತ್ತರಿಸಿದ ಸಲೀಂ ಅಹಮದ್, “ನಾನು 45 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ದುಡಿದಿದ್ದು ನಿಜ. ಆದರೆ, ಸಭಾಪತಿ ಸ್ಥಾನಕ್ಕೆ ಆಯ್ಕೆಯಾದ ಕೂಡಲೇ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಸಭಾಪತಿ ಪೀಠದಲ್ಲಿ ಕುಳಿತ ಬಳಿಕ ನಾನು ಸಂಪೂರ್ಣ ಪಕ್ಷಾತೀತ. ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಎಲ್ಲಾ ಸದಸ್ಯರನ್ನು ಸಮಾನವಾಗಿ ಕಾಣುತ್ತೇನೆ. ವಿಶೇಷವಾಗಿ ವಿರೋಧ ಪಕ್ಷದವರಿಗೆ ಮಾತನಾಡಲು ಹೆಚ್ಚಿನ ಅವಕಾಶ ನೀಡುತ್ತೇನೆ. ನನ್ನ ಸ್ಥಾನದ ಘನತೆಗೆ ಚ್ಯುತಿ ಬರುವಂತಹ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ತಿದ್ದುಪಡಿ ವಿಧೇಯಕಗಳ ಕುರಿತು ಕೇಳಿದ ಪ್ರಶ್ನೆಗೆ, “ಸದ್ಯಕ್ಕೆ ಈ ವಿಧೇಯಕಗಳ ಬಗ್ಗೆ ನಮ್ಮ ಬಳಿ ಯಾವುದೇ ಮಾಹಿತಿ ಇಲ್ಲ. ಸಚಿವ ಸಂಪುಟದಲ್ಲಿ ತೀರ್ಮಾನವಾಗಿ, ವಿಧಾನಸಭೆಯಲ್ಲಿ ಮಂಡನೆಯಾದ ಬಳಿಕವಷ್ಟೇ ಅದು ಪರಿಷತ್ತಿನ ವ್ಯಾಪ್ತಿಗೆ ಬರುತ್ತದೆ” ಎಂದು ಪ್ರತಿಕ್ರಿಯಿಸಿದರು.

ವಿಧಾನಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾಗಿ ಆಯ್ಕೆಯಾಗಿರುವ ಮಂಜುನಾಥ್ ಭಂಡಾರಿ ಅವರಿಗೆ ಸಭಾಪತಿ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version