ಬ್ಯಾಂಕಿನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ
ಮಂಗಳೂರು: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂಬವರು ಬಿಸಿರೋಡಿನ ಬ್ಯಾಂಕಿನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದು, ನವೆಂಬರ್ 20 ರಂದು ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರವಾಗಿ ತಂದೆ ಗದರಿಸಿದ್ದರಿಂದ ಕವಿತಾ ಅವರು ತನ್ನ ಅಜ್ಜಿ ಮನೆ ಕಡೆಗೆ ಹೋದವರು ಕಾಣೆಯಾಗಿರುತ್ತಾರೆ.
ಕಾಣೆಯಾದವರ ಚಹರೆ: ಎತ್ತರ ಸುಮಾರು 4.5 ಅಡಿ, ಸಪೂರ ಶರೀರ, ಎಣ್ಣೆ ಕಪ್ಪು ಮೈ ಬಣ್ಣ, ಕಪ್ಪು ಕಣ್ಣು, ಕೋಲು ಮುಖ, ಬಲ ಕೈ ಅಂಗೈಯ ಹೆಬ್ಬೆರಳಿನ ಮೇಲ್ಬದಿಯಲ್ಲಿ ಹಳೆಯ ಗಾಯದ ಗುರುತು ಇರುತ್ತದೆ. ಕಾಣೆಯಾದ ದಿನ ಮನೆಯಲ್ಲಿ ಧರಿಸಿದ್ದ ಉಪ್ಪಿನಂಗಡಿ ಪದವಿ ಕಾಲೇಜಿನ ಸಮವಸ್ತ್ರವನ್ನು ಧರಿಸಿರುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಉಪ್ಪಿನಂಗಡಿ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
