Home Mangalorean News Kannada News ಮಂಗಳೂರಿನಲ್ಲಿ ಯೂತ್ ಪಾರ್ಲಿಮೆಂಟ್: ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವ –...

ಮಂಗಳೂರಿನಲ್ಲಿ ಯೂತ್ ಪಾರ್ಲಿಮೆಂಟ್: ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವ – ಕ್ಯಾಪ್ಟನ್ ಬ್ರಿಜೇಶ್ ಚೌಟ 

Spread the love

ಮಂಗಳೂರಿನಲ್ಲಿ ಯೂತ್ ಪಾರ್ಲಿಮೆಂಟ್: ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವ – ಕ್ಯಾಪ್ಟನ್ ಬ್ರಿಜೇಶ್ ಚೌಟ 

ಮಂಗಳೂರು: ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ MY Bharat – ದಕ್ಷಿಣ ಕನ್ನಡ, ಮಂಗಳೂರು ವಿಶ್ವವಿದ್ಯಾಲಯ, ಬೇಸೆಂಟ್ ಮಹಿಳಾ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಬೇಸೆಂಟ್ ಮಹಿಳಾ ಕಾಲೇಜಿನಲ್ಲಿ  ವಿಕಸಿತ ಭಾರತ್ ಯಂಗ್ ಲೀಡರ್ಸ್ ಡೈಲಾಗ್ 2027 ಇದರ ಅಡಿಯಲ್ಲಿ ಯೂತ್ ಪಾರ್ಲಿಮೆಂಟ್ 2027 – Lead the Path to Viksit Bharat ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿ, 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಜನರು ಕೇವಲ ಪ್ರೇಕ್ಷಕರಾಗಿರದೆ, ನೀತಿ ನಿರೂಪಣೆಯಲ್ಲಿ ಭಾಗವಹಿಸುವ ನಾಯಕರಾಗಬೇಕು ಎಂದು ಕರೆ ನೀಡಿದರು. ಜಿಲ್ಲಾ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದುಕೊಡಬೇಕೆಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಕರೆ ನೀಡಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿಮೆನ್ಸ್ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಜೀವನ್‌ದಾಸ್ ನಾರಾಯಣ್ ವಹಿಸಿದ್ದರು. ವಿದ್ಯಾರ್ಥಿಗಳಿಗೆ ಭಾಗವಹಿಸುವಿಕೆ ಎಷ್ಟು ಮುಖ್ಯ ಎಂದು ಅವರು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ’ಸೋಜಾ, ಮೈ ಭಾರತ್ ಉಪ ನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ*, ಮಂಗಳೂರು ವಿಶ್ವವಿದ್ಯಾಲಯದ NSS ಕಾರ್ಯಕ್ರಮ ಸಂಯೋಜಕರಾದ ಡಾ. ಶೇಷಪ್ಪ ಕೆ. ಅಮಿನ್, ಜಗದೀಶ್ ಕೆ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ಪರಶುರಾಮ್ ಜಿ. ಮಾಲಗಿ* ಶುಭನುಡಿಗಳನ್ನಾಡಿದರು.

ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾದ ಯೂತ್ ಪಾರ್ಲಿಮೆಂಟ್ ಅಧಿವೇಶನ*ದಲ್ಲಿ ಯುವ ಪ್ರತಿನಿಧಿಗಳು ಸಂಸತ್ತಿನ ಮಾದರಿಯಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿದರು. ವಿಕಸಿತ ಭಾರತ, ಯುವ ನಾಯಕತ್ವ, ಪ್ರಜಾಪ್ರಭುತ್ವದಲ್ಲಿ ಯುವಜನರ ಭಾಗವಹಿಸುವಿಕೆ ಹಾಗೂ ವಿದ್ಯಾರ್ಥಿಗಳು *’ಒಂದು ರಾಷ್ಟ್ರ, ಒಂದು ಚುನಾವಣೆ’ ಬಗ್ಗೆ ಭಾಷಣ ಸ್ಪರ್ಧೆ ನಡೆಯಿತು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version