ರಾಷ್ಟ್ರ ಮಟ್ಟದ ಶಿಬಿರಕ್ಕೆ ಯುವ ತಂಡ ನಿರ್ಗಮನ
ಮಂಗಳೂರು: ತಮಿಳುನಾಡಿನ ಚೆನ್ನೈನಲ್ಲಿ ಸೆಪ್ಟೆಂಬರ್ 22 ರಿಂದ 28, 2026 ರವರೆಗೆ ನಡೆಯಲಿರುವ ಪ್ರತಿಷ್ಠಿತ ರಾಷ್ಟ್ರ ಮಟ್ಟದ ‘ವಂದೇ ಮಾತರಂ’ ಶಿಬಿರದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು 25 ಸದಸ್ಯರ ಯುವ ತಂಡವು ಪ್ರಯಾಣ ಬೆಳೆಸಿದೆ.
ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ‘ಮೇರಾ ಯುವ ಭಾರತ್’ (ಒಙ ಃhಚಿಡಿಚಿಣ) ಆಶ್ರಯದಲ್ಲಿ ಈ ಒಂದು ವಾರದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ, ಅಸ್ಸಾಂ ಮತ್ತು ಮಹಾರಾಷ್ಟ್ರ ಸೇರಿದಂತೆ 6 ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕ್ರಿಯಾಶೀಲ ಯುವ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.
ಯುವಜನರಲ್ಲಿ ಸಂವಿಧಾನದ ಮೌಲ್ಯಗಳನ್ನು ಆಳವಾಗಿ ಬಿತ್ತುವುದು, ಪ್ರಜಾಸತ್ತಾತ್ಮಕ ತತ್ವಗಳನ್ನು ಉತ್ತೇಜಿಸುವುದು ಮತ್ತು ನಾಗರಿಕ ಕರ್ತವ್ಯಗಳನ್ನು ನೆನಪಿಸುವುದರ ಜೊತೆಗೆ ರಾಷ್ಟ್ರೀಯ ಹೆಮ್ಮೆ ಹಾಗೂ ಭಾವನಾತ್ಮಕ ಭಾವೈಕ್ಯತೆಯನ್ನು ಬಲಪಡಿಸುವುದು ಈ ಪ್ರಮುಖ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಸೆಪ್ಟೆಂಬರ್ 22 ರಂದು ತಮಿಳುನಾಡಿನ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕರ್ನಾಟಕದ ತಂಡದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಮೈಸೂರು ಮತ್ತು ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರತಿಭಾವಂತ ಯುವ ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ. ಮುಂದಿನ ಏಳು ದಿನಗಳ ಕಾಲ ಈ ಪ್ರತಿನಿಧಿಗಳು ಸಂವಿಧಾನ ಜಾಗೃತಿ, ನಾಯಕತ್ವ ತರಬೇತಿ, ಸಮುದಾಯ ಸೇವಾ ಉಪಕ್ರಮಗಳು ಮತ್ತು ಭಾರತದ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಸಾಂಸ್ಕøತಿಕ ವಿನಿಮಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ.













