ಕುಂದಾಪುರಕ್ಕೆ ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ: ಪ್ರಕರಣ ದಾಖಲು

Spread the love

ಕುಂದಾಪುರಕ್ಕೆ ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ: ಪ್ರಕರಣ ದಾಖಲು

ಮಂಗಳೂರು: ಬಾಗಲಕೋಟೆ ಮೂಲದ ಅಲ್ಲಾಭಕ್ಷ್ (23) ಎಂಬ ಯುವಕ ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಸ್ತುತ ಕಾಟಿಪಳ್ಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಲ್ಲಾಭಕ್ಷ್ ಅವರು ನವೆಂಬರ್ 3ರಂದು ಕೆಲಸದ ನಿಮಿತ್ತ ಕುಂದಾಪುರಕ್ಕೆ ತೆರಳಿದ್ದರು. ಆದರೆ ಬಳಿಕ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಾಪತ್ತೆಯಾದ ಯುವಕನ ಚಹರೆ ಸುಮಾರು 5.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದು, ಕನ್ನಡ ಮತ್ತು ಉರ್ದು ಭಾಷೆ ಮಾತನಾಡುತ್ತಾರೆ. ನಾಪತ್ತೆಯಾಗುವ ಸಂದರ್ಭದಲ್ಲಿ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಟೀಶರ್ಟ್ ಧರಿಸಿದ್ದರು.

ಯುವಕನ ಬಗ್ಗೆ ಯಾವುದೇ ಮಾಹಿತಿ ಲಭಿಸಿದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments