ಅ.27 ರಂದು ಸಿಎಂ ಸಿದ್ದರಾಮಯ್ಯ ದ.ಕ. ಜಿಲ್ಲಾ ಪ್ರವಾಸ

Spread the love

ಅ.27 ರಂದು ಸಿಎಂ ಸಿದ್ದರಾಮಯ್ಯ ದ.ಕ. ಜಿಲ್ಲಾ ಪ್ರವಾಸ

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.27 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಸಂಜೆ 4:25ಕ್ಕೆ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ‘ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ – 2025’ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾತ್ರಿ 7:25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ :

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅ.27 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 9:55 – ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. 10:30 – ಕುಂಜತ್ತಬೈಲ್ ಮೂಡ ಲೇಔಟ್ ಸ್ಥಳ ಪರಿಶೀಲನೆ, 11:45ಕ್ಕೆ ಉರ್ವಾ ಮಾರುಕಟ್ಟೆ ಕಟ್ಟಡ ಕಾಮಗಾರಿ ಪರಿಶೀಲನೆ, ಮದ್ಯಾಹ್ನ 12:45ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ, 3:30ಕ್ಕೆ ಮುಖ್ಯಮಂತ್ರಿಗಳೊಂದಿಗೆ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2025- ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.


Spread the love
Subscribe
Notify of

0 Comments
Inline Feedbacks
View all comments