ಅಂಬಲಪಾಡಿ ಅಂಡರ್ ಪಾಸ್ ವಾಹನ ಸಂಚಾರಕ್ಕೆ ಮುಕ್ತಗೊಳಿಸಿ: ಯಶ್ಪಾಲ್ ಸುವರ್ಣ
ಉಡುಪಿ: ರಾಷ್ಟ್ರೀಯ ಹೆದ್ದಾರಿ 169 A ಮಲ್ಪೆ ಆದಿ ಉಡುಪಿ ಕಾಮಗಾರಿ ಭರದಿಂದಿನ ಸಾಗುತ್ತಿದ್ದು, ಕರಾವಳಿ ಜಂಕ್ಷನ್ ನಿಂದ ಆದಿ ಉಡುಪಿ ವರೆಗೆ ಕಾಂಕ್ರಿಟೀಕರಣ ನಡೆಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ವಾಹನ ಸಂಚಾರ ನಿರ್ಬಂಧಿಸಿರುವುದರಿಂದ ಅಂಬಲಪಾಡಿ ಫ್ಲೈ ಓವರ್ ಕಾಮಗಾರಿಯ ಅಂಡರ್ ಪಾಸ್ ನಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಕರಾವಳಿ ಜಂಕ್ಷನ್ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧದಿಂದ ಉಡುಪಿ ನಗರದಲ್ಲಿ ಉಡುಪಿ ನಗರ ಪ್ರವೇಶಕ್ಕೆ ವಾಹನಗಳ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ಅನಾನೂಕುಲವಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಂಬಲಪಾಡಿ ಫ್ಲೈ ಓವರ್ ಕಾಮಗಾರಿಯ ಅಂಡರ್ ಪಾಸ್ ನಲ್ಲಿ ವಾಹನ ಸಂಚಾರಕ್ಕೆ ಮುಕ್ತ ಗೊಳಿಸಿದಲ್ಲಿ ಸಾರ್ವಜನಿಕರಿಗೆ ಸಹಕಾರಿ ಯಾಗಲಿದ್ದು, ಕಿನ್ನಿಮುಲ್ಕಿ ಭಾಗದಲ್ಲಿಯೂ ವಾಹನ ದಟ್ಟಣೆ ಕಡಿಮೆಯಾಗಲಿದೆ.
ಜಿಲ್ಲಾಡಳಿತ ವತಿಯಿಂದ ಅಂಬಲಪಾಡಿ ಫ್ಲೈ ಓವರ್ ಕಾಮಗಾರಿಯ ಅಂಡರ್ ಪಾಸ್ ನಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲು ಕ್ರಮ ವಹಿಸುವಂತೆ ಪತ್ರ ಬರೆದು ಆಗ್ರಹಿಸಿದ್ದಾರೆ.













