ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ
ಮಂಗಳೂರು: 2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಶಿಯಲ್ ವರ್ಕ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜಿಯೋಗ್ರಫಿ, ಲೈಬ್ರೆರಿ ಆ್ಯಂಡ್ ಇನ್ಫಾರ್ಮೇಶನ್ ಸೈನ್ಸ್, ಬಯೋಕೆಮಿಸ್ಟ್ರಿ, ಮೆಡಿಕಲ್ ಫಿಸಿಕ್ಸ್, ಫಿಸಿಕ್ಸ್, ಕೆಮಿಸ್ಟ್ರಿ, ಎನ್ವಿರಾನ್ಮೆಂಟ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಮೆಟೀರಿಯಲ್ ಸೈನ್ಸ್/ ಪಿ.ಜಿ ಡಿಪ್ಲೊಮಾ ಇನ್ ಮೆಟೀರಿಯಲ್ ಸೈನ್ಸ್, ಬಾಟನಿ, ಪ್ರಾಣಿಶಾಸ್ತ್ರ, ಸೈಬರ್ ಸೆಕ್ಯೂರಿಟಿ, ಫುಡ್ ಸೈನ್ಸ್ ಆ್ಯಂಡ್ ನ್ಯೂಟ್ರಿಷಿಯನ್, ಬಯೋ ಟೆಕ್ನಾಲಜಿ, ಹ್ಯೂಮನ್ ಕಾನ್ಶಿಯಸ್ನೆಸ್ ಆ್ಯಂಡ್ ಯೋಗಿಕ್ ಸೈನ್ಸಸ್, ಇಂಡಸ್ಟ್ರಿಯಲ್ ಕೆಮಿಸ್ಟ್ರಿ, ಗಣಿತ, ಮೈಕ್ರೊಬಯಾಲಜಿ, ಕಂಪ್ಯೂಟರ್ ಸೈನ್ಸ್/ಎಂ.ಸಿ.ಎ, ಎಂ.ಪಿ.ಇಡಿ + ಬಿ.ಪಿ.ಇಡಿ, ಎಂ.ಬಿ.ಎ ( ಟೂರಿಸಂ), ಎಂ.ಬಿ.ಎ, ಸ್ಟ್ಯಾಟಿಸ್ಟಿಕ್ಸ್, ಎಂ.ಬಿ.ಎ (ಐಬಿ), ಎಂ.ಇಡಿ, ಕಾಮರ್ಸ್ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಅತಿಥಿ ಉಪನ್ಯಾಸಕರ ಅಗತ್ಯ ಇದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿಯನ್ನು ವೆಬ್ಸೈಟ್ Link-14.139.155.115/guest/index.php/home/ ಮೂಲಕ ಆಗಸ್ಟ್ 1 ರೊಳಗೆ ಸಲ್ಲಿಸಬೇಕು.
ಸಲ್ಲಿಸಬೇಕಾದ ದಾಖಲೆಗಳು (ಸ್ವಯಂ ದೃಢೀಕೃತ)
ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಸ್ನಾತಕ ಮತ್ತು ಸ್ನಾತಕೋತ್ತರ ಅಂಕಪಟ್ಟಿಗಳು ಹಾಗೂ ಪದವಿ ಪ್ರಮಾಣ ಪತ್ರಗಳು, ಸಂಶೋಧನಾ ಪತ್ರಿಕೆಗಳು (SCOPUS/WOS/UGC-CARELIST), ಸಂದರ್ಶನ ಸಮಯದಲ್ಲಿ ಅಂಕಪಟ್ಟಿ/ ಪ್ರಮಾಣಪತ್ರಗಳ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
ಅರ್ಜಿದಾರರು ಗಮನಿಸಬೇಕಾದ ಅಂಶಗಳು: ಕೊನೆಯ ದಿನಾಂಕದ ನಂತರ ಸ್ವೀಕೃತವಾದ ಮತ್ತು ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಯುಜಿಸಿ ನಿಗದಿಪಡಿಸಿದ ಮಾನದಂಡ ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ಆದೇಶದನುಸಾರ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯತೆ ಇದ್ದಲ್ಲಿ ಮಾತ್ರ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ವಿಶ್ವವಿದ್ಯಾನಿಲಯ ಕಾಯ್ದಿರಿಸಿದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 250 ಹಾಗೂ(SC/ST/Cat-1 ಅಭ್ಯರ್ಥಿಗಳಿಗೆ ರೂ.125/)ನ್ನು ವೆಬ್ಸೈಟ್ www.mangaloreuniversity.ac.in £À Online fees collection ನಲ್ಲಿರುವ ಆನ್ಲೈನ್ ಪೇಮೆಂಟ್ “005/60-Guest Faculty Application fee” ಎಂಬ ಶೀರ್ಷಿಕೆಗೆ ಲಿಂಕ್ ಮುಖಾಂತರ ಪಾವತಿಸಿ ಇ- ರಿಸಿಪ್ಟ್ ಅರ್ಜಿಯೊಂದಿಗೆ ತಪ್ಪದೇ ಅಪ್ಲೋಡ್ ಮಾಡಬೇಕು. (ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೆ ಮರುಪಾವತಿಸಲಾಗುವುದಿಲ್ಲ.)
ಅರ್ಜಿದಾರರು ಒಂದಕ್ಕಿಂತ ಹೆಚ್ಚಿನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವುದಾದಲ್ಲಿ ಪ್ರತಿ ಹೆಚ್ಚುವರಿ ಕಾರ್ಯಕ್ರಮಕ್ಕೆ ರೂ.100 ರಂತೆ ಮರುಪಾವತಿಸಲಾಗದ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬೇಕು.
ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.mangaloreuniversity.ac.in ನಲ್ಲಿ ಪ್ರಕಟಿಸಲಾಗುತ್ತದೆ. ನಿಗದಿತ ಶುಲ್ಕ ಪಾವತಿಸದ ಹಾಗೂ ಅಪೂರ್ಣ ದಾಖಲೆಗಳನ್ನು ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













