ಅನುಪಮ ಮಹಿಳಾ‌ ಮಾಸಿಕಕ್ಕೆ 25 ವರ್ಷ: ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Spread the love

ಅನುಪಮ ಮಹಿಳಾ‌ ಮಾಸಿಕಕ್ಕೆ 25 ವರ್ಷ: ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಮುಸ್ಲಿಂ ಮಹಿಳೆಯರೇ ನಡೆಸುತ್ತಿರುವ ರಾಜ್ಯದ ಏಕೈಕ ಮಹಿಳಾ ಮಾಸಿಕ ಅನುಪಮ ಮಾಸಿಕಕ್ಕೆ 25 ವರ್ಷಗಳು ತುಂಬಿದೆ. ಈ ಹಿನ್ನೆಲೆಯಲ್ಲಿ 25 ವರ್ಷಗಳ ಯಶಸ್ಸಿನ ಹಿನ್ನೋಟವಿರುವ ವಿಶೇಷ ಸಂಚಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಗುರುವಾರ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, “ಪತ್ರಿಕೋದ್ಯಮದಲ್ಲಿ ಮುಸ್ಲಿಂ ಮಹಿಳೆಯರು ಬೆರಳೆಣಿಕೆಯಷ್ಟು ಮಾತ್ರ ಇದ್ದಾರೆ. ಈ ನಡುವೆ ಕೂಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ ಸಮುದಾಯದ ಮಹಿಳೆಯರೇ ನಡೆಸುತ್ತಿರುವ ಅನುಪಮ ಮಹಿಳಾ ಮಾಸಿಕವು 25 ವರ್ಷಗಳನ್ನು ಪೂರೈಸಿರುವುದು ಶ್ಲಾಘನೀಯ”‘ಎಂದು ಅಭಿನಂದನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅನುಪಮ ಸಂಪಾದಕಿ ಶಹನಾಝ್ ಎಂ, “ರಾಜ್ಯದಲ್ಲಿ ಮಹಿಳೆಯರಿಗೆ ಗ್ಯಾರಂಟಿಗಳನ್ನು ಘೋಷಿಸಿ, ಅದನ್ನು ಅನುಷ್ಠಾನಕ್ಕೆ ತಂದ ನಂತರ ಮಹಿಳೆಯರ ಬದುಕಿನಲ್ಲಿ ಹಲವಾರು ಬದಲಾವಣೆ ಆಗಲು ನೆರವಾಗಿದೆ. ಮಹಿಳೆಯರ ಅಭಿವೃದ್ಧಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಅನುಪಮ ಬಳಗ ಹಾಗೂ ಎಲ್ಲ ಮಹಿಳೆಯರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಬಿಎಂಟಿಸಿ ನಿಗಮದ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ, ಅನುಪಮ ಮಹಿಳಾ ಮಾಸಿಕದ ಉಪಸಂಪಾದಕಿಯರಾದ ಸಮೀನಾ ಉಪ್ಪಿನಂಗಡಿ, ಸಾಜಿದಾ ಮೂಮಿನ್, ಕುಲ್ಸುಮ್ ಅಬೂಬಕ್ಕರ್, ಎಸ್.ಎ‌ಂ. ಮುತ್ತಲಿಬ್, ಫೈಝಲ್ ಇಸ್ಮಾಯೀಲ್, ಸಲೀಂ ಬೋಳಂಗಡಿ ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments