ಆರಿಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಸೆರೆ; ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

Spread the love

ಆರಿಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಸೆರೆ; ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

ಉಳ್ಳಾ: ತೊಕ್ಕೊಟ್ಟು ಫ್ಲೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 11ಕ್ಕೆ ಏರಿದೆ.

ಈತನು ಆರಿಫ್ ಮೇಲೆ ನಡೆದ ಮೊದಲ ದಾಳಿಗೆ ಮುಹಮ್ಮದ್ ಸುಹೈಲ್ ಸಹಕಾರ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ವಿವರವಾದ ತನಿಖೆಯ ನಂತರ ಸುಹೈಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಜನರ ಬಂಧನ ಆಗಿತ್ತು. ಇದೀಗ ಮುಹಮ್ಮದ್ ಸುಹೈಲ್ ಬಂಧನದೊಂದಿಗೆ ಈ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಆರಿಫ್ ಕೊಲೆ ಪ್ರಕರಣದಲ್ಲಿ 15 ಮಂದಿಯ ಪಾತ್ರ ಇರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿತ್ತು.

ಕಳೆದ ಮಾರ್ಚ್ 27ರ ಮುಂಜಾನೆ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕಿನಲ್ಲಿ ಸಂಚರಿಸುತ್ತಿದ್ದ ಆರಿಫ್ ನನ್ನು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.


Spread the love