ಉಡುಪಿ| ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ : ಒರ್ವನ ಬಂಧನ
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಹಾವೇರಿ ರಾಣೆಬೆನ್ನೂರು ನಿವಾಸ ಶಂಭುಲಿಂಗ ಮಡಿವಾಳ (37) ಎಂದು ಗುರುತಿಸಲಾಗಿದೆ.
ಬುಧವಾರ ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕರು ಹಳೇ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹತ್ತಿರ ಇರುವ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ದಾಳಿ ನಡೆಸಿ ಆರೋಪಿ ಶಂಭುಲಿಂಗ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಸ್ವಂತ ಲಾಭಕ್ಕಾಗಿ ಮದ್ಯ ಮಾರಾಟ ಮಾಡುತ್ತಿದ್ದು,ಆರೋಪಿಯನ್ನು ದಸ್ತಗಿರಿ ಮಾಡಿ, ಆತನ ವಶದಿಂದ ಒಟ್ಟು ರೂ. 2,600/- ಮೌಲ್ಯದ ವಿವಿಧ ಬ್ರ್ಯಾಂಡ್ ನ ಮದ್ಯದ ಸಾಚೇಟ್ ಮತ್ತು ನಗದು ರೂ. 3,960/-ನ್ನು ವಶಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಉಡುಪಿ ನಗರ ಠಾಣಾ ಅಪರಾಧ ಕ್ರಮಾಂಕ : 96/2025, ಕಲಂ: 32, 34 Excise act ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಈ ಪ್ರಕರಣದ ಆರೋಪಿಯಾದ ಶಂಭುಲಿಂಗನನ್ನು ದಸ್ತಗಿರಿ ಮಾಡಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಗೊಡಿಸಲಾಗುವುದು.