ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಜು.30ರಂದು ನೇರ ಸಂದರ್ಶನ

Spread the love

ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಜು.30ರಂದು ನೇರ ಸಂದರ್ಶನ  

ಮಂಗಳೂರು: ಎಕ್ಸ್‌ಪರ್ಟ್ ಕಾಲೇಜು, ಕ್ಯಾಲಿಬರ್ ಹಾಗೂ ಕೋಜೆಂಟ್ ಇ-ಸರ್ವಿಸಸ್ ಕಂಪೆನಿಯ ಸಹಯೋಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಜುಲೈ 30ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಪಡೀಲ್ ಪ್ರಜಾಸೌಧದ ನೆಲಮಹಡಿಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಸಂದರ್ಶನದಲ್ಲಿ ಹಾಸ್ಟೆಲ್ ವಾರ್ಡನ್, ಕಸ್ಟಮರ್ ಸಪೋರ್ಟ್ ಅಸೋಸಿಯೇಟ್ ಹಾಗೂ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪಿ.ಯು.ಸಿ., ಡಿಪ್ಲೊಮಾ, ಯಾವುದೇ ಪದವಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾ (Resume) ಜೊತೆಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments