Spread the love
ಎಎಸ್ಸೆ ಐತಪ್ಪ ಕೊಲೆ ಯತ್ನ ಪ್ರಕರಣ: ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ
ಮಂಗಳೂರು: ಎಎಸ್ಸೆ ಐತಪ್ಪ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಆರೋಪಿ ಸಮೀರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕಮಿಷನರ್ ಮನವಿ ಮಾಡಿದ್ದಾರೆ.
ಈ ಹಿಂದೆ ಆರೋಪಿ ಸಫಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಅಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
Spread the love













