ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯ ಪ್ರಕರಣವೊಂದರಲ್ಲಿ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉತ್ತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 291/1998, ಕಲಂ 143, 147, 436, 149 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಸ್.ಸಿ. ನಂ.68/2024ರಲ್ಲಿ ಆರೋಪಿ ಮುನೀರ್ ಅಹಮ್ಮದ್ @ ಅಹಮ್ಮದ್ (59), ತಂದೆ ದಿ. ಗೂಡ್ಸ್ ಅಜೀಜ್, ಮೂಲತಃ ಅನ್ಸಾರಿ ಕ್ರಾಸ್ ರೋಡ್, ಬಂದರು ನಿವಾಸಿಯಾಗಿದ್ದು, ಪ್ರಸ್ತುತ ಕುಲಶೇಖರದ ಸಾಯಿ ಆರ್ಟ್ಸ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದನು.
ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ ಮಾನ್ಯ ನ್ಯಾಯಾಲಯವು ವಾರಂಟ್ ಜಾರಿಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ದಿನಾಂಕ 25-04-2026 ರಂದು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಕುಲಶೇಖರದಲ್ಲಿರುವ ಆತನ ಬಾಡಿಗೆ ಮನೆಯಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.













