ಕತಾರ್ ಮೇಲೆ ಇರಾನ್ ದಾಳಿ – ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ

Spread the love

ಕತಾರ್ ಮೇಲೆ ಇರಾನ್ ದಾಳಿ – ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ಕತಾರ್ ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರಿಗೆ ವಿಮಾನ ನಿಲ್ದಾಣ ತಮ್ಮ ವಿಮಾನಗಳ ಬಗ್ಗೆ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯಿಂದ ಮಾಹಿತಿಯನ್ನು ಪಡೆಯಲು ತಿಳಿಸಿದೆ.

ಮಂಗಳೂರಿನಿಂದ ಹೊರಟಿದ್ದ ಎರ್ ಇಂಡಿಯಾ ಎಕ್ಸ್‌ಪ್ರೆಸ್‌ ದಮ್ಮಾಮ್‌ಗೆ ಹೋಗುವ ಬದಲು ಮುಸ್ಕತ್‌ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿತ್ತು. ಇದೀಗ ಎರಡೂ ವಿಮಾನಗಳು ಮಂಗಳೂರಿಗೆ ವಾಪಸ್ ಆಗಿವೆ.


Spread the love
Subscribe
Notify of

0 Comments
Inline Feedbacks
View all comments