ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್

Spread the love

ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್

ಮಂಗಳೂರು: ಪ್ರಚೋದನಾತ್ಮಕ ಹೇಳಿಕೆ ಆರೋಪದಡಿ ಪ್ರಕರಣವನ್ನು ಎದುರಿಸುತ್ತಿದ್ದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ರಾಜ್ಯ ಹೈಕೋರ್ಟ್ ರಿಲೀಫ್ ನೀಡಿದ್ದು, ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ನ ಏಕಸದಸ್ಯ ಪೀಠ ಆದೇಶ ಹೊರಡಿಸಿ, ಜೂನ್ 10ಕ್ಕೆ ವಿಚಾರಣೆ ಮುಂದೂಡಿದ್ದಾರೆ.

ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 353(2)ರಡಿ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ. ಪ್ರಕರಣ ರದ್ದು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕಲ್ಲಡ್ಕ ಪ್ರಭಾಕರ ಭಟ್ ಪರ ಅರುಣ್ ಶ್ಯಾಂ ವಾದ ಮಾಡಿಸಿದರು.


Spread the love
Subscribe
Notify of

0 Comments
Inline Feedbacks
View all comments