ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಪ್ರದೀಪ್ ಬಂಧನ

Spread the love

ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಪ್ರದೀಪ್ ಬಂಧನ

ಮಂಗಳೂರು: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಪಿಕ್‌ಅಪ್ ಚಾಲಕ ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ.

ಬಂಟ್ವಾಳ ಪುದು ಗ್ರಾಮದ ನಿವಾಸಿ ಪ್ರದೀಪ್ (34) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 9 ಮಂದಿಯನ್ನು ಬಂಧಿಸಲಾಗಿದೆ ಪೊಲೀಸ್ ಪ್ರಕಟನೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments