ಜುಲೈ 9: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜುಲೈ 9 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 11:15- ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ( ಶಿಕ್ಷಣ ಮತ್ತು ಧಾರ್ಮಿಕ) ಪ್ರತಿನಿಧಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಆಯೋಜಿಸಿರುವ ಸಭೆ, ಸಂಜೆ 4 – ವೆನ್ಲಾಕ್ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಯೂತ್ ರೆಡ್ ಕ್ರಾಸ್ ಸೊಸೈಟಿ, ವೆನ್ಲಾಕ್ ಆಸ್ಪತ್ರೆ, ಸಿಟಿ ಲೈಬ್ರರಿ ಮಂಗಳೂರು, ಕೆಎಂಸಿ ಆಸ್ಪತ್ರೆ ಸಹಭಾಗಿತ್ವದಲ್ಲಿ ನವೀಕೃತ ಸಮುದಾಯ ವಾಚನಾಲಯ ಉದ್ಘಾಟನೆ, 5- ಸಕ್ರ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ರಾತ್ರಿ 7:15 ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.