ಟೋಲ್ ಶುಲ್ಕದ ವಿರುದ್ಧ ಆಕ್ರೋಶ – ಪ್ರತಿಭಟನೆ, ಹಲವರ ಬಂಧನ!
ಮಂಗಳೂರು: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಟೋಲ್ ಶುಲ್ಕ ವಸೂಲಿ ಆರಂಭವಾಗಿದೆ. ಇದರಿಂದ ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು ಟೋಲ್ ಹೊರೆ ಎದುರಾಗಿದೆ.
ಇದರ ಬೆನ್ನಲ್ಲೇ, ಮಂಗಳೂರಿನ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಟೋಲ್ ಗೇಟ್ಗೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಲಾಗಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಶಕಗಳಿಂದ ಬಿಜೆಪಿ ಸಂಸದರು ಹಾಗೂ ಬಹುತೇಕ ಬಿಜೆಪಿ ಶಾಸಕರು ಪ್ರತಿನಿಧಿಸುತ್ತಿದ್ದರೂ ಜನರ ಮೇಲೆ ಹೇರಲಾಗುತ್ತಿರುವ ಟೋಲ್ ಹೊರೆ ಬಗ್ಗೆ ಮೌನ ವಹಿಸಿರುವುದು ಏಕೆ? ಶಾಲೆಯಲ್ಲಿ ಶಿಕ್ಷಕರು ಮಾತನಾಡಿದರೂ ರಾಜಕೀಯ ಮಾಡುವ ಇವರೆಲ್ಲಾ ಟೋಲ್ ವಿಚಾರದಲ್ಲಿ ಮಾತ್ರ ಮೌನವಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಆಕ್ರೋಶ ವ್ಯಕ್ತಪಡಿಸುವ ಸಚಿವರಿಗೆ ಜನರ ಆರ್ಥಿಕ ಸಂಕಷ್ಟ ಕಾಣಿಸುತ್ತಿಲ್ಲವೇ ಎಂದು ಎಸ್ಡಿಪಿಐ ಮಂಗಳೂರು ಗ್ರಾಮೀಣ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಆಕ್ರೋಶ ವ್ಯಕ್ತಪಡಿಸಿದರು.













