Spread the love
ಡಾ.ಕೆ.ವಿ.ರಾವ್ ಅವರಿಗೆ ಜೀವಮಾನ ಸಾಧನಾ ಪ್ರಶಸ್ತಿ
ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಅವರಿಗೆ ವಿಜ್ಞಾನ ಮತ್ತು ಶಿಕ್ಷಣಕ್ಕಾಗಿ ಅವರ ಸೇವೆಯನ್ನು ಪರಿಗಣಿಸಿ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು ಜೀವಮಾನ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಬೆಂಗಳೂರಿನ ಆರ್.ವಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ʼಕ್ವಾಂಟಂ ವಿಜ್ಞಾನ ಮತ್ತು ತಂತ್ರಜ್ಞಾನʼ ಸಮ್ಮೇಳನದ ಸಂದರ್ಭದಲ್ಲಿ ಡಾ. ಕೆ.ವಿ.ರಾವ್ ಅವರು ವಿವಿಧ ಜವಾಬ್ದಾರಿಯುತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿರುತ್ತಾರೆ. ಕರ್ತವ್ಯ ನಿರ್ವಹಿಸಿದ ಎಲ್ಲಾ ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಜ್ಞಾನ ಸಂವಹನದ ನಾನಾ ಆಯಾಮಗಳ ಕಾರ್ಯಕ್ರಮಗಳ ಮೂಲಕ ಗೈದಿರುವ ಸೇವೆಗೆ ಈ ಜೀವಮಾನ ಸಾಧನಾ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
Spread the love













