ಡಾ.ಜಿ.ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆ
ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕುಣಿಗಲ್ ಮೂಲದ ರಮೇಶ್ ಆತ್ಮಹತ್ಯೆ ಮಾಡಿಕೊಂಡ ಪರಮೇಶ್ವರ್ ಆಪ್ತ ಸಹಾಯಕ ಎಂದು ತಿಳಿದುಬಂದಿದೆ.
ಜ್ಞಾನಭಾರತಿ ಆವರಣದಲ್ಲಿ ರಮೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಐಟಿ ದಾಳಿಯಿಂದ ನೊಂದು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
‘ನಾನು ಬಡವ. ನಾನು ನಿಯ್ಯತ್ತಿನಿಂದ ಬದುಕುತ್ತಿದ್ದೇನೆ. ಈಗಷ್ಟೇ ಮನೆ ನಿರ್ಮಿಸುತ್ತಿದ್ದೇನೆ. ನನ್ನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರ ಪ್ರಶ್ನೆಯನ್ನು ಎದುರಿಸಲು ಆಗುತ್ತಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆಪ್ತರೊಬ್ಬರಿಗೆ ಆತ್ಮಹತ್ಯೆಗೂ ಮುನ್ನ ಹೇಳಿದ್ದಾರೆ” ಎಂದು ಖಾಸಗಿ ಚಾನೆಲೊಂದು ವರದಿ ಮಾಡಿದೆ. ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.













