ಡಿ.27 ರಂದು ಉಡುಪಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್

Spread the love

ಡಿ.27 ರಂದು ಉಡುಪಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಉಡುಪಿ: ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕರಿಸಿ 80 ವರ್ಷ ತುಂಬುತ್ತಿರುವ ಹಿನ್ನೆಲೆ ಅವರ ಶಿಷ್ಯೆ, ಕೇಂದ್ರ ಸಚಿವೆ ಉಮಾಭಾರತಿ ಡಿ.27ರಂದು ಉಡುಪಿಯ ರಾಜಾಂಗಣದಲ್ಲಿ ಆಯೋಜಿಸಿರುವ ಗುರುವಂದನೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ12.10ಕ್ಕೆ ಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಪಾಲ ವಿ.ಆರ್.ವಾಲಾ, ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಸಹಿತ ಅಷ್ಟಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ಡಿ.18ರಂದು ಬೆಂಗಳೂರಿನಲ್ಲಿ ಪೀಠಾರೋಹಣ ವರ್ಧಂತಿ ಧಾರ್ವಿುಕ ಕಾರ್ಯಕ್ರಮ ನಡೆಯಲಿದೆ.


Spread the love