ಡಿಸೆಂಬರ್ 24 ಉಡುಪಿ ನಗರ ಬಿಜೆಪಿ ವತಿಯಿಂದ ಅಟಲ್ ಟ್ರೋಫಿ ಅಂತಾರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ
ಉಡುಪಿ ನಗರ ಬಿಜೆಪಿ ವತಿಯಿಂದ ನಗರ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಯುವ ಮೋರ್ಚಾದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮಾಜಿ ಪ್ರಧಾನಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮ ಶತಾಬ್ಧಿ ಅಂಗವಾಗಿ ಡಿಸೆಂಬರ್ 24 ಬುಧವಾರದಂದು ಎಂ. ಜಿ. ಎಂ. ಕಾಲೇಜಿನ ಮೈದಾನದಲ್ಲಿ ಅಂತರ್ ರಾಜ್ಯ ಮಟ್ಟದ ಮಹಿಳಾ ಹಾಗೂ ಪುರುಷರ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ ನಡೆಯಲಿರುವುದಾಗಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್ ತಿಳಿಸಿದ್ದಾರೆ.
ಡಿಸೆಂಬರ್ 24 ರಂದು ಬೆಳಿಗ್ಗೆ 10 ಗಂಟೆಗೆ ಮಹಿಳಾ ವಿಭಾಗದ ಪಂದ್ಯಾಟ ಆರಂಭಗೊಳ್ಳಲಿದ್ದು, ಸಂಜೆ 6.30ಕ್ಕೆ ಉಡುಪಿ ಜಿಲ್ಲೆಯ ಶಾಸಕರು, ಸಂಸದರು ಹಾಗೂ ಬಿಜೆಪಿ ಮುಖಂಡರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.
ಈ ವಾಲಿಬಾಲ್ ಪಂದ್ಯಾಕೂಟದಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಭಾಗವಹಿಸಲಿದ್ದು, ವಿಜೇತ ತಂಡಗಳಿಗೆ ನಗದು ಬಹುಮಾನದೊಂದಿಗೆ ಪಾರಿತೋಷಕ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













